ಕ್ರೀಡೆ

ಮೊದಲ ಪಂದ್ಯಕ್ಕೆ ಧವನ್ ಅಲಭ್ಯ

ಹೈದರಾಬಾದ್: ಐಪಿಎಲ್‌ನಲ್ಲಿ ಈ ಬಾರಿ ಹೊಸ ತಂಡವಾಗಿ ಸೇರಿರುವ ಸನ್‌ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯದಲ್ಲಿ ತಂಡದ ಪ್ರಮುಖ ಆಟಗಾರ ಶಿಖರ್ ಧವನ್ ಅವರ ಅನುಪಸ್ಥಿತಿಯನ್ನು ಎದುರಿಸಲಿದೆ.
ಗಾಯದ ಸಮಸ್ಯೆಗೆ ಒಳಗಾಗಿರುವ ಶಿಖರ್ ಧವನ್ ಇನ್ನು ಗುಣಮುಖರಾಗಿಲ್ಲ, ಹೀಗಾಗಿ ಏ.5 ರಂದು ಪುಣೆ ವಾರಿಯರ್ಸ್ ವಿರುದ್ಧದ ಮೊದಲ ಪಂದ್ಯಕ್ಕೆ ಧವನ್ ಅಲಭ್ಯರಾಗಲಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ಶಿಖರ್ ಧವನ್ ನಮ್ಮ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಅವರು ಆದಷ್ಟು ಬೇಗನೆ ಗುಣಮುಖರಾಗಲು ವೈದ್ಯಕೀಯ ತಂಡ ಹೆಚ್ಚಿನ ಪ್ರಯತ್ನ ನಡೆಸುತ್ತಿದೆ ಎಂದು ತಂಡದ ಮುಖ್ಯ ತರಬೇತುದಾರ ಟಾಮ್ ಮೋಡಿ ತಿಳಿಸಿದ್ದಾರೆ.
ಶಿಖರ್ ಧವನ್ ಅವರು ಮುಂದಿನ ಎರಡು ವಾರಗಳಲ್ಲಿ ಸಂಪೂರ್ಣ ಗುಣಮುಖರಾಗಿ ತಂಡವನ್ನು ಆದಷ್ಟು ಬೇಗ ಸೇರಿಕೊಳ್ಳುವ ಭರವಸೆ ಇದೆ ಎಂದು ಅವರು ತಿಳಿಸಿದರು.
ಈ ಬಾರಿಯ ಐಪಿಎಲ್ ಪಂದ್ಯಾವಳಿಗೆ ಉತ್ತಮ ತಯಾರಿಯನ್ನು ನಡೆಸಲಾಗುತ್ತಿದೆ. ಶುಕ್ರವಾರ ಮಧ್ಯಾಹ್ನ ನಾವು ಮೊದಲ ಅಧಿಕೃತ ಅಭ್ಯಾಸವನ್ನು ನಡೆಸಿದ್ದು, ಇದಕ್ಕೂ ಮುನ್ನ ಆಟಗಾರರೊಂದಿಗೆ ಹಲವು ಬಾರಿ ಚರ್ಚೆ ನಡೆಸಿದ್ದೇವೆ. ನನ್ನ ಜತೆಗೆ ತಂಡದ ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ಹಾಗೂ ಇತರೆ ಸಹಾಯಕ ತರಬೇತುದಾರರು ಪ್ರತಿ ಆಟಗಾರನ ಜತೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.
ನಾವು ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕಣಕ್ಕಿಳಿಯುತ್ತಿದ್ದು, ನಮ್ಮ ತಂಡದಲ್ಲಿ ಹಲವು ಹೊಸ ಆಟಗಾರರಿದ್ದಾರೆ. ತಂಡದ ಪ್ರತಿ ಆಟಗಾರರ ನಡುವೆ ಉತ್ತಮ ಸಂಬಂಧ ಬೆಳೆಯುತ್ತಿದ್ದು, ತಂಡದಲ್ಲಿ ಉತ್ತಮ ವಾತಾವರಣ ಮೂಡುತ್ತಿದೆ. ಇದರ ಜತೆಗೆ ತಂಡದಲ್ಲಿನ ಕೆಲವು ವಿದೇಶಿ ಆಟಗಾರರು ತಮ್ಮ ಅಂತಾರಾಷ್ಟ್ರೀಯ ಸರಣಿಯಲ್ಲಿ ಭಾಗವಹಿಸುತ್ತಿದ್ದು ಕೆಲವೇ ದಿನಗಳಲ್ಲಿ ನಮ್ಮ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಚೆನೈನಲ್ಲಿ ಶ್ರೀಲಂಕಾ ಆಟಗಾರರು ಆಡಲು ಸಾಧ್ಯವಾಗದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೋಡಿ, ಈ ರೀತಿಯಾದ ಸೂಕ್ಷ್ಮ ವಿಚಾರಗಳನ್ನು ನಮ್ಮ ಅಧಿಕಾರಿಗಳು ನಿಭಾಯಿಸಲಿದ್ದರೆ. ನಮ್ಮ ತಂಡದ ಸಂಗಕ್ಕಾರ ಹಾಗೂ ಪೆರೇರಾ ತಂಡವನ್ನು ಸೇರಿಕೊಳ್ಳಲಿದ್ದು, ಅಧಿಕಾರಿಗಳು ಈ ವಿಷಯವನ್ನು ಬಗೆಹರಿಸುವ ಭರವಸೆ ಇದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!