ಶೂಟಿಂಗ್ ವಿಶ್ವಕಪ್: ಕೊರಿಯಾಕ್ಕೆ ತೆರಳಿದ ಭಾರತ
ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಅಭಿನವ್ ಬಿಂದ್ರಾ ಹಾಗೂ ಬೆಳ್ಳಿ ಪದಕ ಗೆದ್ದ ವಿಜಯ್ ಕಮಾರ್ ಸೇರಿದಂತೆ ಒಟ್ಟು 30 ಸದಸ್ಯರ ಭಾರತ ಶೂಟಿಂಗ್ ತಂಡ ದಕ್ಷಿಣ ಕೊರಿಯಾಕ್ಕೆ ತೆರಳಿದೆ. ಅಂತಾರಾಷ್ಟ್ರೀಯ ಶೂಟಿಂಗ್ ಫೆಡರೇಷನ್ ಆಯೋಜಿಸಿರುವ ವಿಶ್ವಕಪ್ ಶೂಟಿಂಗ್ ಏಪ್ರಿಲ್ 2ರಿಂದ 10ರವರೆಗೆ ನಡೆಯಲಿದೆ. ಈ ವಿಶ್ವಕಪ್‌ಗೆ ಅಂತಾರಾಷ್ಟ್ರೀಯ ಶೂಟಿಂಗ್ ಫೆಡರೇಷನ್ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ ನಿಯಮಗಳ ಪ್ರಕಾರ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಪಂದ್ಯಾವಳಿಯಲ್ಲಿ ಅರ್ಹತಾ ಸುತ್ತಿನಲ್ಲಿ ಗಳಿಸಿದ ಅಂಕಗಳನ್ನು ಅಂತಿಮ ಸುತ್ತಿಗೆ ಪರಿಗಣಿಸಲಾಗುವುದಿಲ್ಲ. ಇಬ್ಬರು ಶ್ರೇಷ್ಠ ಶೂಟರ್‌ಗಳು ಫೈನಲ್ ಪ್ರವೇಶಿಸಲಿದ್ದು, ಗೆದ್ದವರಿಗೆ ಚಿನ್ನ ಮತ್ತು ಸೋತವರಿಗೆ ಬೆಳ್ಳಿ ಪದಕ ನೀಡಲಾಗುತ್ತದೆ. ಇತ್ತೀಚೆಗೆ ನಡೆದ ಎರಡು ಆಯ್ಕೆ ಟ್ರಯಲ್ಸ್‌ನಲ್ಲಿ ಭಾರತದ ಶೂಟರ್‌ಗಳಿಗೆ ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ. ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವಿಜಯ್ ಕುಮಾರ್ ಪುರುಷರ 25 ಮೀ. ರ್ಯಾಪಿಡ್ ಫೈರ್ ಪಿಸ್ತೂಲ್ ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ಪ್ರಸ್ತುತ ನಂ.2 ಸ್ಥಾನದಲ್ಲಿರುವ ಕುಮಾರ್ ಅಗ್ರ ಸ್ಥಾನಕ್ಕೇರಲು ಇದು ಸೂಕ್ತ ಸಮಯವಾಗಿದೆ.