ಫೈನಲ್ ಟಿಕೆಟ್ ಮಾರಾಟ ಆರಂಭ
ಕೋಲ್ಕತಾ: ಈ ಬಾರಿಯ ಐಪಿಎಲ್ ಪಂದ್ಯಾವಳಿಯ 2ನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯದ ಆನ್ಲೈನ್ ಟಿಕೆಟ್ ಗಳ ಮಾರಾಟ ಶನಿವಾರದಿಂದ ಐಪಿಎಲ್ನ ಅಧಿಕೃತ ವೆಬ್ಸೈಟ್ನಲ್ಲಿ ಆರಂಭವಾಗಿದೆ.
ಮೇ 24ರಂದು 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಮೇ 26 ರಂದು ಫೈನಲ್ ಪಂದ್ಯ ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯಗಳ ಟಿಕೆಟ್ ಶನಿವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಿದ್ದು, www.iplt20.com ವೆಬ್ಸೈಟ್ನಲ್ಲಿ ಟಿಕೆಟ್ ಮಾರಾಟ ಮಾಡಲಾಗುತ್ತಿದೆ. ಈ ಪಂದ್ಯಕ್ಕೆ ಕನಿಷ್ಠ ಟಿಕೆಟ್ ಮೊತ್ತ ರು. 300 ಆಗಿದೆ ಎಂದು ಐಪಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇನ್ನು ಚೆನ್ನೈನಿಂದ ದೆಹಲಿಗೆ ಸ್ಥಾಳಾಂತರವಾಗಿರುವ ಎಲಿಮಿನೇಟರ್ ಹಾಗೂ ಮೊದಲ ಕ್ವಾಲಿಫೈಯರ್ ಪಂದ್ಯಗಳ ಟಿಕೆಟ್ ಬಗೆಗಿನ ಮಾಹಿತಿಯನ್ನು ಆದಷ್ಟು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ತಿಳಿಸಲಾಗಿದೆ. ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣಸಲಿವೆ. ಇಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.