ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಮಾಸ್ಟರ್ಸ್ ಕಪ್: ತಂಡಗಳ ಆಹ್ವಾನ

Vishwanath S
Updated On : 24 May 2013, 1:18 am

ಬೆಂಗಳೂರು: ಭಾರತೀಯ ಅಂಗವಿಕಲರ ಕ್ರಿಕೆಟ್ ಸಂಸ್ಥೆ (ಪಿಸಿಸಿಎಐ) ಹಾಗೂ ಕರ್ನಾಟಕ ಅಂಗವಿಕಲರ ಕ್ರಿಕೆಟ್ ಸಂಸ್ಥೆ ಆಶ್ರಯದಲ್ಲಿ ಐಪಿಎಲ್ ಮಾದರಿಯಲ್ಲಿ, 'ಐಪಿಸಿಎಲ್ ಮಾಸ್ಟರ್ಸ್ ಕಪ್-2013' ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಷ್ಟ್ರಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ತಂಡಗಳನ್ನು ಆಹ್ವಾನಿಸಲಾಗಿದೆ. ಪಂದ್ಯಾವಳಿಯು ಫರಿದಾಬಾದ್‌ನ ಕ್ರೀಡಾಂಗಣದಲ್ಲಿ ಆಗಸ್ಟ್ 27ರಿಂದ ಸೆಪ್ಟಂಬರ್ 3ರವರೆಗೆ ನಡೆಸಲು ಉದ್ದೇಶಿಸಲಾಗಿದೆ.
ಪ್ರತಿಯೊಂದು ತಂಡಗಳಲ್ಲಿ 13 ಆಟಗಾರರಿಗೆ ಅವಕಾಶವಿರುತ್ತದೆ. ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು, ತಮ್ಮ ಆಟಗಾರರ ಸ್ವವಿವರ, ಭಾವಚಿತ್ರ ಹಾಗೂ ವೈದ್ಯಕೀಯ ಪ್ರಮಾಣಪತ್ರಗಳನ್ನು (ಪ್ರತಿಯೊಬ್ಬ ಆಟಗಾರನಿಗೂ ಪ್ರತ್ಯೇಕವಾಗಿ) ಕಳುಹಿಸಲು ಕೋರಲಾಗಿದೆ.
ಆಟಗಾರರಿಗೂ ಅವಕಾಶ: ಬೆಂಗಳೂರು ತಂಡವೂ ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈ ತಂಡದಲ್ಲಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ, 95902777414 (ಸಂದೀಪ್), 07760075716 (ಶ್ರೀಧರ್) ಸಂಖ್ಯೆಗಳನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement