ಕ್ರೀಡೆ

ಮೇಯಪ್ಪನ್ ಬಗ್ಗೆ ಈಗಲೇ ನಿರ್ಧಾರ ಬೇಡ: ಶುಕ್ಲಾ

ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಮಾಲೀಕರಾದ ಗುರುನಾಥ್ ಮೇಯಪ್ಪನ್ ಅವರು ಭಾಗಿಯಾಗಿದ್ದಾರೆಂದು ಈಗಲೇ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂದು ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳವಾರ ಬಂಧಿತರಾಗಿದ್ದ ನಟ ವಿಂದೂ ಧಾರಾಸಿಂಗ್ ಅವರು ಗುರುನಾಥ್ ಪರವಾಗಿ ಬೆಟ್ಟಿಂಗ್ ನಡೆಸುತ್ತಿದ್ದುದಾಗಿ ಪೊಲೀಸರಿಗೆ ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ, ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೀವ್ ಶುಕ್ಲಾ, 'ಸ್ಪಾಟ್ ಫಿಕ್ಸಿಂಗ್‌ನಲ್ಲಿ ಗುರುನಾಥ್ ಅವರ ಹೆಸರು ಥಳುಕು ಹಾಕಿಕೊಂಡಿರುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ತನಿಖೆ ಪೂರ್ಣಗೊಳ್ಳುವ ಮೊದಲೇ ಗುರುನಾಥ್ ಆರೋಪಿ ಎಂದು ಪರಿಗಣಿಸುವುದು ಸರಿಯಲ್ಲ. ತನಿಖಾ ವರದಿ ಬಂದ ಮೇಲಷ್ಟೇ ನಾವು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು' ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video