ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಅರುಣ್ ಜೇಟ್ಲಿ
ನವದೆಹಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಸಿಸಿಐನ ಉಪಾಧ್ಯಕ್ಷ ಹಾಗೂ ಬಿಸಿಸಿಐ ಶಿಸ್ತು ಸಮಿತಿಯ ಸದಸ್ಯರಾಗಿರುವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಜೇಟ್ಲಿಯವರು ಐಪಿಎಲ್ ಆಡಳಿತ ಮಂಡಳಿ ಸಭೆಯ ಸದಸ್ಯರಾಗಿದ್ದು, ಸ್ಪಾಟ್ ಫಿಕ್ಸಿಂಗ್ ಪ್ರಕರಣ ಕುರಿತು ನಿಗದಿತ ಸಮಯದಲ್ಲಿ ಮುಕ್ತ ಹಾಗೂ ನಿಸ್ಪಕ್ಷಪಾತ ತನಿಖೆಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಹಾಗೂ ಭದ್ರತಾ ವಿಭಾಗ (ಎಸಿಎಸ್ಯು), ಈ ಪ್ರಕರಣದ ಎಲ್ಲಾ ವಿಷಯಗಳಲ್ಲೂ ತನಿಖೆ ನಡೆಸಲಿದೆ ಎಂದು ಅವರು ತಿಳಿಸಿದರು. ಸುಪ್ರಿಂ ಕೋರ್ಟ್ ಬಿಸಿಸಿಐಗೆ 15 ದಿನಗಳ ಕಾಲಾವಕಾಶ ನೀಡಿದ್ದು, ಬಿಸಿಸಿಐ ತನ್ನ ವರದಿಯನ್ನು ಸಿದ್ಧಪಡಿಸಿ ಶಿಸ್ತು ವಿಭಾಗಕ್ಕೆ ಸಲ್ಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೊಗೊಳ್ಳುವ ಭರವಸೆ ನೀಡುತ್ತೇವೆ ಎಂದು ಹೇಳಿದ್ದಾರೆ.