ಬಿಸಿಸಿಐ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ
ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ಬಿಸಿಸಿಐ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರ ನಿರಾಕರಿಸಿದೆ. ಬಿಸಿಸಿಐ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಅತಿ ಅಗತ್ಯದ ಪರಿಸ್ಥಿತಿ ಎದುರಾದರೆ ಮಾತ್ರ ಈ ಬಗ್ಗೆ ಚಿಂತನೆ ನಡೆಸುತ್ತದೆ ಹೊರತು, ಅನಾವಶ್ಯಕವಾಗಿ ಹಸ್ತಕ್ಷೇಪ ಮಾಡುವುದಿಲ್ಲ.
ಬಿಸಿಸಿಐ ಈ ರೀತಿಯ ಮೋಸದಾಟವನ್ನು ತಡೆಯುವ ಸಲುವಾಗಿ ಬಿಸಿಸಿಐ ತನ್ನ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಸ್ತುನಿಷ್ಠತೆಯನ್ನು ತರಬೇಕೆಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಸರ್ಕಾರ ಕ್ರೀಡೆಯಿಂದ ಸಾಧ್ಯವಾದಷ್ಟೂ ದೂರವಿರಲು ಪ್ರಯತ್ನಿಸುತ್ತದೆ. ಏಕೆಂದರೆ ಕ್ರೀಡೆಯಲ್ಲಿ ರಾಜಕೀಯ ಬೆರೆತರೆ ಕ್ರೀಡೆಗೆ ಹಾನಿಯಾಗುವ ಸಾಧ್ಯತೆಗಳಿವೆ ಎಂದು ಕೇಂದ್ರ ಕಾನೂನು ಸಚಿವ ಕಪಿಲ್ ಸಿಬಲ್ ತಿಳಿಸಿದ್ದಾರೆ.