ಮಾಧ್ಯಮಗಳಿಂದ ತಪ್ಪಿಸಿಕೊಂಡ ಧೋನಿ
ಕೋಲ್ಕತಾ: ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಾಧ್ಯಮದವರಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಮುಂಬೈ ವಿರುದ್ಧ ಐಪಿಎಲ್ ಫೈನಲ್ ಪಂದ್ಯದ ನಂತರ ನಡೆದ ತಂಡಗಳ ಪತ್ರಿಕಾ ಗೋಷ್ಠಿಯಲ್ಲಿ ಸಿಎಸ್ಕೆ ತಂಡದ ಪರ ಕೋಚ್ ಸ್ಟೀಫನ್ ಫ್ಲೆಮ್ಮಿಂಗ್ ಆಗಮಿಸಿದ್ದು, ಈ ಮೂಲಕ ಧೋನಿ ಮಾಧ್ಯಮಗಳಿಂದ ತಪ್ಪಿಸಿಕೊಂಡಿದ್ದಾರೆ.