ಶ್ರೀನಿ ಬೆಂಬಲಕ್ಕೆ ಫಾರೂಕ್ ಅಬ್ದುಲ್ಲಾ
ಗಂದೇರ್ಬಲ್: ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದ್ದರೆ, ಇತ್ತ ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲಾ ಶ್ರೀನಿವಾಸನ್ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಶ್ರೀನಿವಾಸನ್ ಏಕೆ ರಾಜಿನಾಮೆ ನೀಡಬೇಕು? ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಲ್ಲಿ ಶ್ರೀನಿವಾಸನ್ ಭಾಗಿಯಾಗಿದ್ದಾರೆ ಎಂದು ಸಾಬೀತಾಗಿಲ್ಲ. ಹಾಗಾಗಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಫಾರೂಕ್ ತಿಳಿಸಿದ್ದಾರೆ.