ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಟೀಂ ಇಂಡಿಯಾ ಚಲೇ ಲಂಡನ್

ಜೂ. 6ರಿಂದ ಆರಂಭವಾಗುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ 15 ಆಟಗಾರರ ಟೀಂ ಇಂಡಿಯಾ ತಂಡ...

Rashmi Kasaragodu
Updated On : 30 May 2013, 12:09 pm

ಮುಂಬೈ: ಜೂ. 6ರಿಂದ ಆರಂಭವಾಗುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ 15 ಆಟಗಾರರ ಟೀಂ ಇಂಡಿಯಾ ತಂಡ ಮಂಗಳವಾರ ರಾತ್ರಿ ಲಂಡನ್ಗೆ ಪ್ರಯಾಣ ಬೆಳೆಸಿತು.
ಪ್ರಯಾಣ ಬೆಳೆಸುವುದಕ್ಕೂ ಮುನ್ನ, ಮುಂಬೈನಲ್ಲಿ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ಸಂದರ್ಭದಲ್ಲಿ, ಸ್ಪಾಟ್ ಫಿಕ್ಸಿಂಗ್ಗೆ ಸಂಬಂಧಿಸಿದಂತೆ, ಧೋನಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ಆದರೆ, ಇದೀಗ ಲಂಡನ್ ತಲುಪಿರುವ ಧೋನಿ ಅಲ್ಲಿ ಮತ್ತೊಂದು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ವಿಶ್ವದ ಅನೇಕ ಕ್ರೀಡಾ ವರದಿಗಾರರು ಅಲ್ಲಿ ಜಮಾಯಿಸುವುದರಿಂದ ಧೋನಿ ಹಾಗೂ ಅವರ ನಡುವಿನ ಮಾತುಕತೆ ಕುತೂಹಲಕ್ಕೆಡೆಮಾಡಿವೆ.
ಎರಡು ಅಭ್ಯಾಸ ಪಂದ್ಯಗಳು: ಪಂದ್ಯಾವಳಿಗೂ ಮುನ್ನ ಜೂ 1 ಹಾಗೂ 4ರಂದು ಅಭ್ಯಾಸ ಪಂದ್ಯಗಳನ್ನು ಟೀಂ ಇಂಡಿಯಾ ಆಡಲಿದೆ.
ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲೇ ಭಾರತ ತಂಡ, ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯ ವೇಲ್ಸ್ನ ಕಾರ್ಡಿಪ್ ಮೈದಾನದಲ್ಲಿ ನಡೆಯಲಿದೆ.

ಟೀಂ ಇಂಡಿಯಾ
ಮಹೇಂದ್ರ ಸಿಂಗ್ ಧೋನಿ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸುರೇಶ್ ರೈನಾ, ದಿನೇಶ್ ಕಾರ್ತಿಕ್, ಮುರಳಿ ವಿಜಯ್, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇರ್ಫಾನ್ ಪಠಾಣ್, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ, ಅಮಿತ್ ಮಿಶ್ರಾ ಹಾಗೂ ಆರ್. ವಿನಯ್ ಕುಮಾರ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement