ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸನ್ನಿಗೆ ಫ್ರಾಂಚೈಸಿಗಳ ಬೆಂಬಲ

Rashmi Kasaragodu
Updated On : 2 Apr 2014, 1:26 am

ನವದೆಹಲಿ: ಐಪಿಎಲ್ ಏಳನೇ ಆವೃತ್ತಿಯು ಯಶಸ್ವಿಯಾಗಿ ಆಯೋಜಿಸಲು ಸುನಿಲ್ ಗವಾಸ್ಕರ್ ಅವರಿಗೆ ಸಂಪೂರ್ಣ ಬೆಂಬಲ ನೀಡಲು ಐಪಿಎಲ್ ಫ್ರಾಂಚೈಸಿಗಳು ನಿರ್ಧರಿಸಿವೆ.
ಏ.16ರಿಂದ ಯುಎಇಯಲ್ಲಿ ಐಪಿಎಲ್ ಮೊದಲ ಹಂತದ ಪಂದ್ಯಗಳು ನಡೆಯಲಿದ್ದು, ಈ ವೇಳೆ ಬಿಸಿಸಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಐಪಿಎಲ್ನ ಫ್ರಾಂಚೈಸಿಗಳು ಒಮ್ಮತದ ನಿರ್ಧಾರ ಕೈಗೊಂಡಿವೆ.
ಬಿಸಿಸಿಐ ಮೂಲಗಳ ಪ್ರಕಾರ ಗವಾಸ್ಕರ್ ಸೋಮವಾರ ಐಪಿಎಲ್ ಫ್ರಾಂಚೈಸಿಗಳನ್ನು ಭೇಟಿ ಮಾಡಿದ್ದು, ಐಪಿಎಲ್ ಟಿ20 ಪಂದ್ಯಾವಳಿಯನ್ನು ಆಯೋಜಿಸುವ ಕುರಿತು ಮಾತುಕತೆ ನಡೆಸಿದ್ದಾರೆ.
ಎಲ್ಲಾ ಫ್ರಾಂಚೈಸಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಅವರ ಬೆಂಬಲವನ್ನು ನೀಡಿದ್ದಾರೆ. ಅಲ್ಲದೆ ಐಪಿಎಲ್ ಪಂದ್ಯಾವಳಿಯನ್ನು ಆಯೋಜಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement