ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಬಾಕ್ಸಿಂಗ್ಗಾಗಿ ಅಡಾಕ್ ಸಮಿತಿ ರಚನೆ

Rashmi Kasaragodu
Updated On : 4 Apr 2014, 1:32 am

ನವದೆಹಲಿ: ಅಂತಾರಾಷ್ಟ್ರೀಯ ಬಾಕ್ಸಿಂಗ್ ಫೆಡರೇಷನ್, ಭಾರತೀಯ ಬಾಕ್ಸಿಂಗ್ ಸಂಸ್ಥೆಯನ್ನು ವಜಾಗೊಳಿಸಿರುವ ಹಿನ್ನಲೆಯಲ್ಲಿ ಬಾಕ್ಸರ್ ಹಾಗೂ ಕೋಚ್ಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲು ಭಾರತೀಯ ಒಲಿಂಪಿಕ್ ಸಮಿತಿಯು ಅಡಾಕ್ ಸಮಿತಿಯನ್ನು ರಚಿಸಿದೆ.
ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಐಒಎ ಮೇಲಿನ ನಿಷೇಧವನ್ನು ತೆರವುಗೊಳಿಸಿದ ನಂತರ ಎನ್.ರಾಮಚಂದ್ರನ್ ಅವರ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ಗುರುವಾರ ಐಒಎ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.
ಐಒಎ ಅಡಾಕ್ ಸಮಿತಿಯನ್ನು ರಚಿಸುವ ಮೂಲಕ ಭಾರತದ ಬಾಕ್ಸರ್ಗಳು ಹಾಗೂ ಮತ್ತು ಕೋಚ್ಗಳು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡಲು ನೆರವು ಮಾಡಿಕೊಡಲಾಗಿದೆ ಎಂದು ರಾಮಚಂದ್ರನ್ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement