ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಮಹಿಳಾ 10ಮೀ. ಏರ್ ಪಿಸ್ತೂಲ್: ಹೀನಾ ಸಿಧು ವಿಶ್ವದ ನಂಬರ್ ಒನ್ ಶೂಟರ್

Mainashree
Updated On : 7 Apr 2014, 10:02 am

ನವದೆಹಲಿ: ಭಾರತದ ಖ್ಯಾತ ಏರ್ ಪಿಸ್ತೂಲ್ ಶೂಟರ್ ಹೀನಾ ಸಿಧು ಮಹಿಳೆಯರ 10 ಮೀ. ವಿಭಾಗದಲ್ಲಿ ವಿಶ್ವದ ನಂಬರ್ ಒನ್ ರ್ಯಾಂಕಿಂಗ್ ಪಡೆದಿದ್ದಾರೆ.
ಸೋಮವಾರ ಬಿಡುಗಡೆಯಾದ ಅಂತಾರಾಷ್ಟ್ರೀಯ ಶೂಟಿಂಗ್ ಸ್ಫೋರ್ಟ್ಸ್ ಫೆಡರೇಷನ್(ಐಎಸ್‌ಎಸ್‌ಎಫ್)ನ ನೂತನ ರ್ಯಾಕಿಂಗ್ ಪಟ್ಟಿಯಲ್ಲಿ ಹೀನಾ ಅಗ್ರಸ್ಥಾನ ಪಡೆದಿದ್ದಾರೆ.
ಕಳೆದ ಒಂದು ವರ್ಷದಿಂದ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಹೀನಾ, ಬಹುತೇಕ ಎಲ್ಲಾ ಐಎಸ್‌ಎಸ್‌ಎಫ್‌ನ ಪ್ರಮುಖ ಪಂದ್ಯಾವಳಿಯಲ್ಲಿ ಪದಕ ಪಡೆದುಕೊಂಡಿದ್ದಾರೆ.
2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ 12ನೇ ಸ್ಥಾನ ಪಡೆದಿದ್ದ ಹೀನಾ, ನಂತರ ಅತ್ಯುತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ಇದೇ ಪ್ರದರ್ಶನವನ್ನು ಮುಂದುವರಿಸಿ 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಉತ್ತಮ ಫಲಿತಾಂಶ ಪಡೆಯುವ ವಿಶ್ವಾಸ ಹೊಂದಿದ್ದಾರೆ.
ವಿಶ್ವದ ನಂಬರ್ ಒನ್ ಶೂಟರ್ ಆಗಿರುವುದಕ್ಕೆ ಸಂತೋಷವಾಗುತ್ತಿದೆ. ಇಷ್ಟು ವರ್ಷಗಳ ಕಾಲ ನಾನು ಸಾಕಷ್ಟು ಕಠಿಣ ಪರಿಶ್ರಮ ಹಾಕಿದ್ದೇನೆ. ಈ ಸಾಧನೆಗೆ ನನ್ನ ಪತಿ ರೊನಾಕ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನನಗೆ ಉತ್ತಮ ಬೆಂಬಲ ನೀಡಿದ್ದು, ಈ ವೇಳೆ ಕೋಚ್ ಅನಾಟೋಲಿ ಅವರಿಗೂ ಧನ್ಯವಾದ ಅರ್ಪಿಸುತ್ತೇನೆ. ಸರ್ಕಾರ ನನಗೆ ಸೂಕ್ತ ನೆರವು ನೀಡಿದೆ. ಒಲಿಂಪಿಕ್ಸ್‌ನಲ್ಲಿ ಪದಕ ಪಡೆಯುವುದು ನನ್ನ ಮುಂದಿರುವ ಗುರಿ ಎಂದು ಹೀನಾ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement