ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ವಿಶ್ವ ರ್ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕಿಳಿದ ಭಾರತ

Mainashree
Updated On : 7 Apr 2014, 10:01 am

ದುಬೈ: ವಿಶ್ವ ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿದ ಭಾರತ ತಂಡ ಟಿ20 ರ್ಯಾಂಕಿಂಗ್‌ನಲ್ಲಿ 2ನೇ ಸ್ಥಾನಕ್ಕೆ ಕುಸಿದಿದೆ. ಆದರೆ, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಸ್ಪಿನ್ನರ್ ಆರ್. ಅಶ್ವಿನ್ ಅವರು ಕ್ರಮವಾಗಿ 2ನೇ ಮತ್ತು 3ನೇ ಸ್ಥಾನ ಅಲಂಕರಿಸುವ ಮೂಲಕ ವೃತ್ತಿಶ್ರೇಷ್ಠ ಸಾಧನೆ ಮಾಡಿದ್ದಾರೆ.
'ಬಾಂಗ್ಲಾದೇಶದಲ್ಲಿ ನಡೆದ 2014ರ ವಿಶ್ವ ಟಿ20 ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ ಭಾರತದ ಈ ಜೋಡಿ, ಐಸಿಸಿ ಸೋಮವಾರ ಬಿಡುಗಡೆ ಮಾಡಿರುವ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಅತ್ಯುತ್ತಮ ಸ್ಥಾನಕ್ಕೇರಿದ್ದಾರೆ' ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯ ಸಾಧಿಸಿದ ಶ್ರೀಲಂಕಾ, ತಂಡ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಮರಳಿದೆ. ಇದರೊಂದಿಗೆ ಇದೇ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಗೆದ್ದುಕೊಂಡ ಲಂಕಾ 3 ರೇಟಿಂಗ್ ಪಾಯಿಂಟ್‌ಗಳನ್ನು ಪಡೆಯುವ ಮೂಲಕ 133 ರೇಟಿಂಗ್ ಪಾಯಿಂಟಗ್‌ಳೊಂದಿಗೆ ಅಗ್ರಸ್ಥಾನಕ್ಕೇರಿದೆ. 130 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.
ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತ ತಂಡ ಅಗ್ರಸ್ಥಾನಕ್ಕೇರಿತ್ತು. ಆದರೆ, ಫೈನಲ್ ಪಂದ್ಯದಲ್ಲಿ ಗೆದ್ದವರಿಗೆ ಅಗ್ರಸ್ಥಾನ ಅಲಂಕರಿಸುವ ಅವಕಾಶವಿತ್ತು. ಹೀಗಾಗಿ ಈಗ ಲಂಕಾ ತಂಡ ಅಗ್ರಸ್ಥಾನಕ್ಕೇರಿದಂತಾಗಿದೆ. ಇನ್ನು ಪಂದ್ಯಾವಳಿಯಲ್ಲಿ ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದುಕೊಂಡ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಅವರು ಪಂದ್ಯಾವಳಿಯಲ್ಲಿ 106.33 ಸರಾಸರಿಯಲ್ಲಿ 129.14 ಸ್ಟ್ರೈಕ್ ರೇಟ್‌ನೊಂದಿಗೆ 319 ರನ್ ಗಳಿಸಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಅಜೇಯ 72 ರನ್ ಗಳಿಸಿದ್ದ ಕೊಹ್ಲಿ ಫೈನಲ್ ಪಂದ್ಯದಲ್ಲಿ 77 ರನ್ ಗಳಿಸಿದ್ದರು.ಇದು ಕೊಹ್ಲಿ ಅವರಿಗೆ ರ್ಯಾಂಕಿಂಗ್‌ನಲ್ಲಿ 68 ರೇಟಿಂಗ್ ಪಾಯಿಂಟ್ ಪಡೆಯಲು ನೆರವಾಗಿದೆ. ಈಗ ಕೊಹ್ಲಿ 889 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಎರಾನ್ ಫಿಂಚ್ ಅವರಿಂಗಿಂತ ಮೂರು ಅಂಕ ಹಿಂದಿದ್ದಾರೆ.
10ನೇ ಸ್ಥಾನದಲ್ಲಿರುವ ಸುರೇಶ್ ರೈನಾ ಅವರು ಬ್ಯಾಟಿಂಗ್ ವಿಭಾಗದ ಟಾಪ್ 10 ಪಟ್ಟಿಯಲ್ಲಿರುವ ಭಾರತದ ಇನ್ನೊಬ್ಬ ಬ್ಯಾಟ್ಸ್‌ಮನ್ ಎನಿಸಿದ್ದಾರೆ. 5ನೇ ಸ್ಥಾನದಲ್ಲಿರುವ ಕುಸಾಲ್ ಪೆರೇರಾ ಅವರು ಟಾಪ್10ನಲ್ಲಿರುವ ಶ್ರೀಲಂಕಾದ ಏಕೈಕ ಬ್ಯಾಟ್ಸ್‌ಮನ್ ಎನಿಸಿದ್ದಾರೆ.
ಏತನ್ಮಧ್ಯೆ, ಬೌಲಿಂಗ್ ವಿಭಾಗದಲ್ಲಿ ಭಾರತದ ಆರ್. ಅಶ್ವಿನ್ ಅವರು ಪಾಕಿಸ್ತಾನದ ಸಯೀದ್ ಅಜ್ಮಲ್ ಅವರು 3ನೇ ಸ್ಥಾನ ಹಂಚಿಕೊಂಡಿದ್ದಾರೆ. ಪಂದ್ಯಾವಳಿಯಲ್ಲಿ ಅಶ್ವಿನ್ ಅವರೊಂದಿಗೆ 11 ವಿಕೆಟ್ ಪಡೆಯುವ ಮೂಲಕ 11.27 ಸರಾಸರಿಯೊಂದಿಗೆ 5.35 ಎಕಾನಮಿಯನ್ನು ಕಾಪಾಡಿಕೊಂಡಿಕೊಂಡಿದ್ದರು. ಇದರೊಂದಿಗೆ ಮಹತ್ವದ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 4ನೇ ಬೌಲರ್ ಎನಿಸಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಅದ್ಭುತವಾಗಿ ಬೌಲಿಂಗ್ ಪ್ರದರ್ಶಿಸಿದ್ದ ಅಶ್ವಿನ್ 22 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಇನ್ನು ಫೈನಲ್ ಪಂದ್ಯದಲ್ಲಿ 29 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಇದರೊಂದಿಗೆ 25 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿದ್ದ ಅವರು ಒಟ್ಟು 711 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ.
ಆದರೆ, ವೆಸ್ಟ್ ಇಂಡೀಸ್‌ನ ಸ್ಯಾಮುಯಲ್ ಬದ್ರಿ ಮತ್ತು ಸುನಿಲ್ ನಾರಾಯಣ ಅವರು ಕ್ರಮವಾಗಿ ಮೊದಲನೇ ಮತ್ತು 2ನೇ ಸ್ಥಾನವನ್ನು ಹೊಂದಿದ್ದಾರೆ.
ಮಿಥಾಲಿ ರ್ಯಾಂಕಿಂಗ್ ಅಬಾಧಿತ
ದುಬೈ:
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರು ಟಿ20 ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ 5ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ 5ನೇ ಸ್ಥಾನದಲ್ಲೇ ಇದ್ದ ಅವರು ಪಂದ್ಯಾವಳಿ ನಂತರವೂ ಅದೇ ಸ್ಥಾನದಲ್ಲಿದ್ದಾರೆ.   ಇನ್ನು 8ನೇ ಸ್ಥಾನದಲ್ಲಿರುವ ಪೂನಮ್ ರೌತ್ ಮತ್ತು 9ನೇ ಸ್ಥಾನದಲ್ಲಿರುವ ಹರ್ಮನ್‌ಪ್ರೀತ್ ಕೌರ್ ಟಾಪ್ 10ನಲ್ಲಿರುವ ಭಾರತದ ಇತರ ಆಟಗಾರ್ತಿಯರಾಗಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಜೂಲನ್ ಗೋಸ್ವಾಮಿ ಅವರು 2 ಸ್ಥಾನ ಕುಸಿದಿದ್ದು, ಬೌಲಿಂಗ್ ವಿಭಾಗದಲ್ಲಿ 19ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement