ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಐಪಿಎಲ್‌ನಿಂದ ಸಾಬೀತು ಪಡಿಸಬೇಕಿಲ್ಲ

Srinivasa Murthy VN
Updated On : 10 Apr 2014, 12:23 pm

ನವದೆಹಲಿ: ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್, ಐಪಿಎಲ್ ಪಂದ್ಯಾವಳಿಯಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಪರ ಆಡಲಿದ್ದು, ಈ ಅವಕಾಶದಿಂದ ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇಸಿಬಿ, ಕೆವಿನ್ ಪೀಟರ್‌ಸನ್ ಅವರನ್ನು ರಾಷ್ಟ್ರೀಯ ತಂಡದಿಂದ ಕೈಬಿಟ್ಟಿದ್ದರಿಂದ ಅವರ ಅಂತಾರಾಷ್ಟ್ರೀಯ ವೃತ್ತಿ ಜೀವನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ನಾನು ಈಗಾಗಲೇ ಇಂಗ್ಲೆಂಡ್ ಪರ ಆಡುವುದಿಲ್ಲ ಎಂಬ ಅಂಶವನ್ನು ಮನಗಂಡಿದ್ದೇನೆ. ಆ ವಿಷಯದಿಂದ ಮುಂದಕ್ಕೆ ಸಾಗಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಕ್ರಿಕೆಟ್‌ನಿಂದ ಇಷ್ಟು ದಿನಗಳ ಕಾಲ ಸಿಕ್ಕ ವಿಶ್ರಾಂತಿ ಅತ್ಯುತ್ತಮವಾಗಿತ್ತು. ಹಾಗಾಗಿ ಐಪಿಎಲ್‌ನಲ್ಲಿ ಆಡಲು ಉತ್ಸುಕನಾಗಿದ್ದೇನೆ. ಈ ಹಿಂದಿನ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ನಾನು ಇಲ್ಲಿ ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ನಾನು ಐಪಿಎಲ್‌ನಲ್ಲಿ ಆಡಲು ಇಚ್ಛಿಸುತ್ತೇನೆ. ಕಳೆದ ಬಾರಿ ಗಾಯದ ಸಮಸ್ಯೆಯಿಂದಾಗಿ ನಾನು ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಬಾರಿ ಮತ್ತೆ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ. ನಾನು ಕಳೆದ 10 ವರ್ಷಗಳಿಂದ ವಿಶ್ವದ ಎಲ್ಲಾ ಭಾಗಗಳಲ್ಲಿ ಕ್ರಿಕೆಟ್ ಆಡಿದ್ದು, ಈಗ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಐಪಿಎಲ್ ಏಳನೇ ಆವೃತ್ತಿಯಲ್ಲಿ ಕೆವಿನ್ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ನಾಯಕನಾಗಿ ಜವಬ್ದಾರಿ ನಿರ್ವಹಿಸಲಿದ್ದು, ತಂಡ ಸಮತೋಲನದಿಂದ ಕೂಡಿದ್ದು ಉತ್ತಮ ಪ್ರದರ್ಶನ ನೀಡಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement