ಗವಾಸ್ಕರ್‌ಗೆ ಪಾರೆಖ್ ಸಲಹೆಗಾರ
ನವದೆಹಲಿ: ಬಿಸಿಸಿಐ ಹಾಗೂ ಐಪಿಎಲ್‌ಗೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರಿಗೆ ಹೌಸಿಂಗ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೋರೇಷನ್ ಅಧ್ಯಕ್ಷ ದೀಪಕ್ ಪಾರೆಖ್ ಅವರನ್ನು ವಿಶೇಷ ಸಲಹೆಗಾರರನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಐಪಿಎಲ್ ಆಡಳಿತ ಮಂಡಳಿ ಸಭೆಗಳಲ್ಲಿ ಗವಾಸ್ಕರ್ ಅವರಿಗೆ ಸಲಹೆ ನೀಡುವ ಹಾಗೂ ಮುಂದಿನ ಎರಡು ತಿಂಗಳ ಕಾಲ ಐಪಿಎಲ್ ಅನ್ನು ಸುಸೂತ್ರವಾಗಿ ಆಯೋಜಿಸುವ ಉದ್ದೇಶದಿಂದ ಆರ್ಥಿಕ ವ್ಯವಹಾರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಪಾರೆಖ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.