ಮಲ್ಯ ಶ್ಲಾಘನೆ
ಶಾರ್ಜಾ: ಮುಂಬಯಿ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿದ ತಮ್ಮ ಆಟಗಾರರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕ ವಿಜಯ್ ಮಲ್ಯ ಅಭಿನಂದನೆ ಸಲ್ಲಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಜಯದಲ್ಲಿ ಮಿಂಚಿದ ಪಾರ್ಥಿವ್ ಪಟೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ಅಲ್ಲದೆ, ಬೌಲರ್ಗಳೂ ಸಹ ಉತ್ತಮ ದಾಳಿ ನಡೆಸಿ ಎದುರಾಳಿಯನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.