ಮುಂಬೈ ತಂಡಕ್ಕೆ ರಿಕ್ಕಿ ಸಲಹೆಗಾರ
ದುಬೈ: ಆಸ್ಟ್ರೇಲಿಯಾಕ್ಕೆ ಎರಡು ಬಾರಿ ವಿಶ್ವಕಪ್ ಗೆದ್ದುಕೊಟ್ಟ ಮಾಜಿ ನಾಯಕ ರಿಕಿ ಪಾಂಟಿಂಗ್ ತಂಡದ ಸಲಹೆಗಾರರಾಗಿ ಮುಂಬೈ ಇಂಡಿಯನ್ಸ್ ಪಡೆಯನ್ನು ಸೇರಿಕೊಂಡಿದ್ದಾರೆ.
ಆಧುನಿಕ ಯುಗದ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿರುವ ರಿಕಿ ಪಾಂಟಿಂಗ್ ಏಳನೇ ಆವೃತ್ತಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಸಲಹೆಗಾರರಾಗಿ ಪಾತ್ರ ನಿರ್ವಹಿಸಲಿದ್ದಾರೆ. ಕಳೆದ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿದ್ದ ಸಂದರ್ಭದಲ್ಲಿ ತಂಡದ ಸದಸ್ಯರಾಗಿದ್ದ ಅವರು ಯುಎಇ ಹಂತದಲ್ಲಿ ಆಡಲಾಗುವ ಕೊನೆಯ ಎರಡು ಪಂದ್ಯಗಳಲ್ಲಿ ಮುಂಬೈ ತಂಡದ ಜೊತೆಗಿರಲಿದ್ದಾರೆ.
ಮತ್ತೆ ಮುಂಬೈ ಇಂಡಿಯನ್ಸ್ ಪರ ಸೇವೆ ಸಲ್ಲಿಸಲು ಉತ್ಸುಕತೆಯಲ್ಲಿದ್ದೇನೆ. ಕಳೆದ ಋತುವಿನಲ್ಲಿ ಚಾಂಪಿಯನ್ ಆಗಿದ್ದಕ್ಕೆ ಹೆಮ್ಮೆಯಾಗುತ್ತಿದ್ದು, ಈ ವರ್ಷ ಹೊಸ ಪಾತ್ರವನ್ನು ನಿರ್ವಹಿಸಲಿದ್ದೇನೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.