ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಬಹುಮಾನ ಮೊತ್ತ ಹೆಚ್ಚಲಿ: ಶಿವೇಗೌಡ

Srinivasa Murthy VN
Updated On : 2 Aug 2014, 12:09 pm

ಗ್ಲಾಸ್ಗೋ: ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಅಥ್ಲೀಟ್‌ಗಳಿಗೆ ನೀಡುವ ಬಹುಮಾನ ಮೊತ್ತ ಹೆಚ್ಚಾಗಬೇಕು ಎಂದು 20ನೇ ಕಾಮನ್‌ವೆಲ್ತ್ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ವಿಕಾಸ್ ಗೌಡ ತಂದೆ ಶಿವೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾಮನ್‌ವೆಲ್ತ್‌ನಲ್ಲಿ ಚಿನ್ನ ಗೆದ್ದ ಅಥ್ಲೀಟ್‌ಗಳಿಗೆ ತಮಿಳುನಾಡಿನಲ್ಲಿ ರು. 50 ಲಕ್ಷ ನಗದು ಬಹುಮಾನ ಪ್ರಕಟಿಸಲಾಗಿದೆ. ಇನ್ನು ಪಂಜಾಬ್ ಮತ್ತು ಹರ್ಯಾಣದಲ್ಲಿ ಅದಕ್ಕೂ ಹೆಚ್ಚಿನ ಮೊತ್ತದ ಬಹುಮಾನವನ್ನು ಪ್ರಕಟಿಸಿದ್ದಾರೆ. ಹೀಗಾಗಿ ಕರ್ನಾಟಕ ಸರ್ಕಾರ ಸಹ ಅಥ್ಲೀಟ್‌ಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ಹೆಚ್ಚಿನ ಬಹುಮಾನ ಮೊತ್ತವನ್ನು ಪ್ರಕಟಿಸಬೇಕು ಎಂದು ಶಿವೇಗೌಡ ಒತ್ತಾಯಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಏಷ್ಯನ್ ಗೇಮ್ಸ್‌ಗಾಗಿ  ಅಭ್ಯಾಸದಲ್ಲಿ ನಿರತರಾಗಲಿರುವ ವಿಕಾಸ್, ಆನಂತರವಷ್ಟೇ ಅವರು ತವರಿಗೆ ವಾಪಾಸಾಗಲಿದ್ದಾರೆ ಎಂದು ಶಿವೇಗೌಡ ತಿಳಿಸಿದ್ದಾರೆ. ಈಗಾಗಲೇ ಬಹುಮಾನ ಮೊತ್ತ ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶಿವೇಗೌಡ ಅವರ ಅಭಿಪ್ರಾಯವನ್ನು ಮನವರಿಕೆ ಮಾಡಿಕೊಡುವುದಾಗಿ, ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ರೈ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement