ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಕಳಂಕಿತರಾದರೆ ಕ್ರಮ: ಸರಬಾನಂದ

Srinivasa Murthy VN
Updated On : 4 Aug 2014, 11:35 am

ನವದೆಹಲಿ: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಳೆ ಅಶಿಸ್ತಿನಿಂದ ವರ್ತಿಸಿ ಬಂಧನಕ್ಕೊಳಗಾದ ಇಬ್ಬರು ಅಧಿಕಾರಿಗಳ ವಿರುದ್ಧದ ಪ್ರಕರಣದ ಬಗ್ಗೆ ಸಮಗ್ರ ವರದಿ ಕೈಸೇರಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಸರಬಾನಂದ ಸೋನೋವಾಲ್ ಹೇಳಿದ್ದಾರೆ.
ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಆರೋಪಕ್ಕೆ ಒಳಗಾಗಿದ್ದರೆ, ಕುಸ್ತಿ ರೆಫರಿ ವೀರೇಂದರ್ ಮಲಿಕ್ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಇಬ್ಬರೂ ಅಧಿಕಾರಿಗಳನ್ನು ಗ್ಲಾಸ್ಗೋ ಪೊಲೀಸರು ಬಂಧಿಸಿದ್ದರು.  ಈ ಇಬ್ಬರೂ ಅಧಿಕಾರಿಗಳ ವಿರುದ್ಧದ ಆರೋಪಗಳು ಗಂಭೀರವಾಗಿವೆ. ಆದರೆ, ಪೂರ್ಣ ವಿಚಾರಣೆ ನಂತರ ಬರುವ ವರದಿಗಾಗಿ ಕಾಯುತ್ತಿದ್ದು, ಅದರ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರೀಡಾ ಸಚಿವರು ಪ್ರತಿಕ್ರಿಯಿಸಿದ್ದಾರೆ.  ಭವಿಷ್ಯದಲ್ಲಿ ಈ ಅಧಿಕಾರಿಗಳು ತಂಡದ ಜೊತೆ ವಿದೇಶಕ್ಕೆ ತೆರಳುವ ಕುರಿತಂತೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸರಬಾನಂದ ಸೋನೋವಾಲ್, ಇದು ದೇಶದ ಪ್ರತಿಷ್ಠೆಯ ಪ್ರಶ್ನೆ. ಇಂತಹ ಘಟನೆಗಳಲ್ಲಿ ಯಾರೇ ಭಾಗಿಯಾಗಲಿ, ದೇಶದ ಘನತೆಗೆ ಧಕ್ಕೆ ತರುವಂತಹ ಸನ್ನಿವೇಶಗಳನ್ನು ಸಹಿಸಲಾಗದು ಎಂದಿದ್ದಾರೆ.
ಅಥ್ಲೆಟಿಕ್ಸ್ ದಂತಕತೆ ಮಿಲ್ಖಾ ಸಿಂಗ್ ಪ್ರತಿಕ್ರಿಯಿಸಿ, ಈ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕ್ರೀಡಾಕೂಟದಲ್ಲಿ ಅಧಿಕಾರಿಗಳು ದೇಶಕ್ಕೆ ಕೆಟ್ಟ ಹೆಸರು ತಂದಿದ್ದಾರೆ. ಭವಿಷ್ಯದಲ್ಲಿ ಇವರು ವಿದೇಶಕ್ಕೆ ತೆರಳದಂತೆ ನಿಷೇಧ ಹೇರಬೇಕು ಎಂದಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement