ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸ್ಯಾಮ್ಸನ್, ಕರಣ್, ಬಿನ್ನಿಗೆ ಸ್ಥಾನ

Rashmi Kasaragodu
Updated On : 6 Aug 2014, 12:38 pm

ಮುಂಬೈ: ಕೇರಳ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಮತ್ತು ರೈಲ್ವೇಸ್ ಆಲ್ರೌಂಡರ್ ಕರಣ್ ಶರ್ಮಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಐದು ಏಕದಿನ ಹಾಗೂ ಟಿ-20 ಕ್ರಿಕೆಟ್ ಸರಣಿಗಾಗಿ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಹೊಸಮುಖಗಳಾಗಿವೆ.
ಸಂದೀಪ್ ಪಾಟೀಲ್ ನೇತೃತ್ವದ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿ ಸದಸ್ಯರು ಮಂಗಳವಾರ ಇಲ್ಲಿ ಸಭೆ ಸೇರಿ 17 ಸದಸ್ಯರ ಭಾರತ ತಂಡ ಪ್ರಕಟಿಸಿದರು. ಮಹೇಂದ್ರ ಸಿಂಗ್ ಧೋನಿ ಸಾರಥ್ಯದ ತಂಡದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದೆ. ಕರ್ನಾಟಕದ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ ಕೂಡ ಸ್ಥಾನ ಹೊಂದಿದ್ದಾರೆ. ಆದರೆ, ಮತ್ತೊಬ್ಬ ಕನ್ನಡಿಗ ರಾಬಿನ್ ಉತ್ತಪ್ಪ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಮುಂಬೈ ವೇಗಿ ಧವಳ್ ಕುಲಕರ್ಣಿ ಗಾಯದಿಂದ ಚೇತರಿಸಿಕೊಂಡಿರುವ ಕಾರಣ ಮತ್ತೆ ತಂಡಕ್ಕೆ ಮರಳಿದ್ದಾರೆ. ಅಲ್ಲದೆ ಏಷ್ಯಾ ಕಪ್ನಿಂದ ಕೈಬಿಡಲಾಗಿದ್ದರೂ, ಕಳೆದ ಜೂನ್ನಲ್ಲಿನ ಬಾಂಗ್ಲಾ ಪ್ರವಾಸದಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಸುರೇಶ್ ರೈನಾ ಸಹ ವಾಪಸಾಗಿದ್ದಾರೆ. ವೇಗದ ಬೌಲರ್ಗಳಾದ ಮೋಹಿತ್ ಶರ್ಮಾ ಮತ್ತು ಉಮೇಶ್ ಯಾದವ್ ಕೂಡ ಸ್ಥಾನ ಉಳಿಸಿಕೊಂಡಿದ್ದಾರೆ. ಗಾಯದಿಂದ ಹೊರಗುಳಿದಿರುವ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಅಲ್ಲದೆ ಗೌತಮ್ ಗಂಭೀರ್ ಮತ್ತು ಚೇತೇಶ್ವರ ಪೂಜಾರ ಅವರನ್ನು ಕೈಬಿಡಲಾಗಿದೆ.  2015ರ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಸ್ಯಾಮ್ಸನ್, ಮೋಹಿತ್, ಸ್ಟುವರ್ಟ್ ಬಿನ್ನಿ ಹಾಗೂ ಕರಣ್ ಶರ್ಮಾಗೆ ಅವಕಾಶ ನೀಡಲಾಗಿದೆ ಎಂದು ಆಟಗಾರರ ಪಟ್ಟಿ ಪ್ರಕಟಿಸಿದ ನಂತರ ಬಿಸಿಸಿಐ ಕಾರ್ಯದರ್ಶಿ ಸಂಜಯ್ ಪಟೇಲ್ ಹೇಳಿದರು. ಆಗಸ್ಟ್ 25ರಿಂದ ಏಕದಿನ ಸರಣಿ ಆರಂಭವಾಗಲಿದೆ.
ಭಾರತ ತಂಡ: ಮಹೇಂದ್ರ ಸಿಂಗ್ ಧೋನಿ (ನಾಯಕ), ವಿರಾಟ್ ಕೊಹ್ಲಿ, ಶಿಖರ್ ಧವನ್, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ಸುರೇಶ್ ರೈನಾ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಸ್ಟುವರ್ಟ್ ಬಿನ್ನಿ, ಭುವನೇಶ್ವರ ಕುಮಾರ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಅಂಬಟಿ ರಾಯುಡು, ಉಮೇಶ್ ಯಾದವ್, ಧವಳ್ ಕುಲಕರ್ಣಿ, ಸಂಜು ಸ್ಯಾಮ್ಸನ್, ಕರಣ್ ಶರ್ಮಾ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement