ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಟೆಸ್ಟ್ ರ್ಯಾಂಕಿಂಗ್: ಕುಸಿದ ಕೊಹ್ಲಿ, ಪೂಜಾರ, ಅಶ್ವಿನ್

ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ಕುಸಿತಕಂಡಿದ್ದಾರೆ.

Srinivasa Murthy VN
Updated On : 20 Aug 2014, 10:50 am

ದುಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ ಭಾರತ ತಂಡದ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್‌ನ ಬ್ಯಾಟಿಂಗ್ ವಿಭಾಗದಲ್ಲಿ ಕುಸಿತಕಂಡಿದ್ದಾರೆ. ಪೂಜಾರ 4 ಸ್ಥಾನ ಕೆಳಗಿಳಿಯುವ ಮೂಲಕ 16ನೇ ಸ್ಥಾನ ಪಡೆದಿದ್ದರೆ, 5 ಸ್ಥಾನ ಕುಸಿದಿರುವ ಕೊಹ್ಲಿ 26ನೇ ಕ್ರಮಾಂಕದಲ್ಲಿದ್ದಾರೆ.

ಅಂತಿಮ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ 82 ರನ್‌ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿ ನಾಲ್ಕು ಸ್ಥಾನ ಮೇಲೇರಿದ್ದು, 28ನೇ ಸ್ಥಾನ ಪಡೆದಿದ್ದಾರೆ. ಈ ಸರಣಿಯಲ್ಲಿ ಅವರ ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ. ಆದರೆ ಅಗ್ರ ಹತ್ತರಲ್ಲಲಿ ಯಾವೊಬ್ಬ ಬ್ಯಾಟ್ಸಮನ್ ಸ್ಥಾನ ಪಡೆದಿಲ್ಲ. ಶ್ರೀಲಂಕಾದ ಕುಮಾರ ಸಂಗಕ್ಕಾರ ಬ್ಯಾಟಿಂಗ್ ಕ್ರಮಾಂಕದಲ್ಲಿ ಮೊದಲ ಸ್ಥಾನದ ಗೌರವ ಪಡೆದಿದ್ದರೆ, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಎರಡನೇ ಕ್ರಮಾಂಕ ಹೊಂದಿದ್ದಾರೆ.

ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಕೂಡ ಭಾರತದ ಯಾವುದೇ ಬೌಲರ್‌ಗಳಿಗೆ ಅಗ್ರ ಹತ್ತರೊಳಗೆ ಸ್ಥಾನ ಲಭಿಸಿಲ್ಲ. ದಕ್ಷಿಣ ಆಪ್ರಿಕಾದ ವೇಗಿ ಡೇಲ್ ಸ್ಟೇಯ್ನ್ ಮೊದಲಿಗರಾಗಿದ್ದಾರೆ. ಆಸ್ಟ್ರೇಲಿಯಾ ರಯಾನ್ ಹ್ಯಾರಿಸ್ ಎರಡನೇ ಕ್ರಮಾಂಕದಲ್ಲಿದ್ದಾರೆ. ಅದೇ ರೀತಿ ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಮೊದಲ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡದ ಆಟಗಾರರು ಎಲ್ಲ ವಿಭಾಗಗಳಲ್ಲೂ ವೈಫಲ್ಯ ಅನುಭವಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement