ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನೂತನ ನಾಯಕ ಸ್ಟೀವೆನ್ ಸ್ಮಿತ್ 
ಕ್ರೀಡೆ

ಆಸೀಸ್ ತಂಡಕ್ಕೆ ಸ್ಮಿತ್ ನಾಯಕ

ಆಸ್ಟ್ರೇಲಿಯಾ ತಂಡದ ನಾಯಕ ಮೈಕಲ್ ಕ್ಲಾರ್ಕ್ ಅವರು ಗಾಯದ ಸಮಸ್ಯೆ ಹಿನ್ನಲೆಯಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಿಂದ..

ಬ್ರಿಸ್ಬೇನ್: ಆಸ್ಟ್ರೇಲಿಯಾ ತಂಡದ ನಾಯಕ ಮೈಕಲ್ ಕ್ಲಾರ್ಕ್ ಅವರು ಗಾಯದ ಸಮಸ್ಯೆ ಹಿನ್ನಲೆಯಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಹಿನ್ನಲೆಯಲ್ಲಿ, ತಂಡದ ನಾಯಕತ್ವದ ಜವಾಬ್ದಾರಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಯುವ ಆಟಗಾರ ಸ್ಟೀವನ್ ಸ್ಮಿತ್ ಹೆಗಲಿಗೆ ವಹಿಸಿದೆ.

ಸೋಮವಾರ ಈ ನಿರ್ಧಾರ ಪ್ರಕಟಿಸಿದ ಕ್ರಿಕೆಟ್ ಆಸ್ಟ್ರೇಲಿಯಾ, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸ್ಮಿತ್ ಅವರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದೆ. ಕ್ಲಾರ್ಕ್ ಅನುಪಸ್ಥಿತಿ ವಿಶ್ವಕಪ್ ಪಂದ್ಯಾವಳಿಗೂ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿದೆ. ಅಲ್ಲದೆ ಆಸ್ಟ್ರೇಲಿಯಾ ತಂಡ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ಮುಂದಿನ ವರ್ಷ ಜೂನ್ ತಿಂಗಳಲ್ಲಿ ಆಡಳಿದೆ.

ನಾಯಕತ್ವ ರೋಚಕವಾಗಿವಾಗಿದೆ: ಆಸ್ಟ್ರೇಲಿಯಾ ತಂಡದ ನಾಯಕರಾಗಿ ಆಯ್ಕೆಯಾದ ನಂತರ ಮಾತನಾಡಿದ ಸ್ಟೀವನ್ ಸ್ಮಿತ್, ಭಾರತ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳನ್ನು ನಾಯಕನಾಗಿ ಕಣಕ್ಕಿಳಿಯಲಿರುವುದು ಹೆಚ್ಚು ರೋಚಕತೆಯನ್ನು ತಂದಿದೆ ಎಂದು ತಿಳಿಸಿದ್ದಾರೆ.

ಕ್ಲಾರ್ಕ್‌ಗೆ ಶಸ್ತ್ರ ಚಿಕಿತ್ಸೆ: ಭಾರತ ವಿರುದ್ಧ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿ ಆಸ್ಟ್ರೇಲಿಯಾ ನಾಯಕ ಮೈಕಲ್ ಕ್ಲಾರ್ಕ್, ಈಗ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಪಂದ್ಯದ ವೇಳೆ ಬಲಗಾಲಿನ ಸ್ನಾಯು ಸೆಳೆತದಿಂದ ಅಂತಿಮ ದಿನ ಮೈದಾನ ತೊರೆದ ಕ್ಲಾರ್ಕ್‌ಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈಗ ಕ್ಲಾರ್ಕ್ ಅವರಿಗೆ ಮಂಗಳವಾರ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಆಸ್ಟ್ರೇಲಿಯಾ ತಂಡ ಮುಂಬರುವ ವಿಶ್ವಕಪ್ ಟೂರ್ನಿಯಲ್ಲೂ ಅವರ ಅನುಪಸ್ಥಿತಿಯನ್ನು ಎದುರಿಸುವ ಸಾಧ್ಯತೆ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುವ ಹಡಗುಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಕೆ; ಅಮೆರಿಕ ಹೇಳಿದ್ದೇನು?

ಅಮೆರಿಕ-ಇಸ್ರೇಲ್ ದಾಳಿಗೆ 165 ಇರಾನ್ ಶಾಲಾ ಬಾಲಕಿಯರು ಬಲಿ: ಅಂತಿಮ ಯಾತ್ರೆಯಲ್ಲಿ ಜನಸಾಗರ, ತೀವ್ರ ಆಕ್ರೋಶ! Video

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು, ಭಯೋತ್ಪಾದಕ ಕೃತ್ಯ ಶಂಕೆ..!

ಇರಾಕ್‌ನಲ್ಲಿ US ಪಡೆ ತಂಗಿದ್ದ ಹೋಟೆಲ್ ಮೇಲೆ ಇರಾನ್ ಬೆಂಬಲಿತ ಗುಂಪು ದಾಳಿ!

SCROLL FOR NEXT