2ನೇ ಸ್ಥಾನ ಉಳಿಸಿಕೊಂಡ ಭಾರತ
ದುಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಭಾರತ ತಂಡ, ಐಸಿಸಿ ಟೆಸ್ಟ್ ರ್ಯಾಕಿಂಗ್ನಲ್ಲಿ ಸದ್ಯದ ಮಟ್ಟಿಗೆ ಎರಡನೇ ಸ್ಥಾನವನ್ನು ಉಳಿಸಿಕೊಂಡಿದೆ. ಕಳೆದೆರಡು ಸರಣಿಗಳನ್ನು ಕೈಚೆಲ್ಲಿದ ಪರಿಣಾಮ ಭಾರತ ತಂಡ ರ್ಯಾಕಿಂಗ್ ಪಟ್ಟಿಯಲ್ಲಿ 117 ಅಂಕಗಳಿಂದ 112 ಅಂಕಕ್ಕೆ ಕುಸಿದಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕಿಂತ ಕೇವಲ 1 ಅಂಕದ ಮುನ್ನಡೆಯೊಂದಿಗೆ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆ ಪಡೆದಿದ್ದು, ಎರಡನೇ ಸ್ಥಾನಕ್ಕೇರಲು ಉತ್ತಮ ಅವಕಾಶವಿದೆ. ಅಲ್ಲದೆ ಟೆಸ್ಟ್ ಚಾಂಪಿಯನ್ಶಿಪ್ಗೆ ಏ.1ರಂದು ಅಂತಿಮ ದಿನವಾಗಿರುವುದರಿಂದ ಆಸ್ಟ್ರೇಲಿಯಾ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಸ್ಥಾನಕ್ಕೇರುವ ಸಾಧ್ಯತೆ ಹೆಚ್ಚಾಗಿದೆ.