ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಆಂಗ್ಲರ ವಿರುದ್ಧ ಟೆಸ್ಟ್ ಆಡಲಿರುವ ಭಾರತ ವನಿತೆಯರು

Rashmi Kasaragodu
Updated On : 25 Feb 2014, 2:01 am


ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡ 2006ರ ನಂತರ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಡಲು ಸಿದ್ಧವಾಗಿದೆ.
   ಬರುವ ಆಗಸ್ಟ್ 13ರಿಂದ 16ರವರೆಗೆ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ವನಿತೆಯರು ಹೋರಾಡಲಿದ್ದಾರೆ. 2006ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡು ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಜಯ ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಅಂತರದಿಂದ ರೋಚಕ ಜಯ ಕಂಡುಕೊಂಡಿತ್ತು. ಅಂಜುಮ್ ಚೋಪ್ರಾ ಅವರು ಮೊದಲ ಇನಿಂಗ್ಸ್‌ನಲ್ಲಿ 98 ರನ್ ಗಳಿಸಿ ಶತಕವಂಚಿತರಾಗಿದ್ದರು. ಆದರೆ, ನಂತರ ಇಂಗ್ಲೆಂಡ್ ಕೇವಲ 99 ರನ್‌ಗಳಿಗೆ ಆಲೌಟ್ ಆಗಿತ್ತು. ಆಕರ್ಷಕ ಬೌಲಿಂಗ್ ಮಾಡಿದ್ದ ಜೂಲನ್ ಗೋಸ್ವಾಮಿ ಅವರು 33 ರನ್ ನೀಡಿ 5 ವಿಕೆಟ್ ಪಡೆದಿದ್ದರು.
  ಟೆಸ್ಟ್ ಸರಣಿಯೊಂದಿಗೆ ಇದೇ ಸಂದರ್ಭದಲ್ಲಿ ಮೂರು ಏಕದಿನ ಪಂದ್ಯಗಳನ್ನು ಭಾರತೀಯ ವನಿತೆಯರು ಇಂಗ್ಲೆಂಡ್ ವಿರುದ್ಧ ಆಡಲಿದ್ದಾರೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement