ಸಹಾಯಕ ಕೋಚ್: ಬಿಸಿಸಿಐ ನಕಾರ
ಮುಂಬೈ: ಭಾರತ ಬೌಲಿಂಗ್ ವಿಭಾಗ ಕಳಪೆ ಪ್ರದರ್ಶನ ನೀಡುತ್ತಿರುವ ಹಿನ್ನಲೆಯಲ್ಲಿ ಸಹಾಯಕ ಕೋಚ್ ಜೊ ಡ್ವೇಸ್ ಸ್ಥಾನಕ್ಕೆ ಭಾರತೀಯ ಸಹಾಯಕ ಕೋಚ್ ನೇಮಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎಂಬ ವರದಿಯನ್ನು ಬಿಸಿಸಿಐ ತಳ್ಳಿಹಾಕಿದೆ. ಈ ರೀತಿಯಾದ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಅಲ್ಲದೆ ಈ ವಿಷಯ ಶುಕ್ರವಾರ ಭುವನೇಶ್ವರದಲ್ಲಿ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸುವುದಿಲ್ಲ ಎಂದು ಬಿಸಿಸಿಐನ ಕಾರ್ಯದರ್ಶಿ ಸಂಜಯ್ ಪಟೇಲ್ ತಿಳಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತಂಡದ ಮುಖ್ಯ ಕೋಚ್ ಡಂಕನ್ ಫ್ಲೆಚರ್ ಜತೆ ಮಾತುಕತೆ ನಡೆಸಲಾಗುವುದು. ಅಲ್ಲದೆ ಭಾರತ ತಂಡ ಬಾಂಗ್ಲಾ ಪ್ರವಾಸದಲ್ಲಿ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದೆ ಎಂದು ತಿಳಿಸಿದ್ದಾರೆ.