ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ನಿರ್ಧಾರವಾಗದ ಐಪಿಎಲ್ ಸ್ಥಳ

Mainashree
Updated On : 28 Feb 2014, 10:23 am

ಭುವನೇಶ್ವರ: ಸಾಧ್ಯವಾದಷ್ಟು ಐಪಿಎಲ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿರುವ ಬಿಸಿಸಿಐ, ಲೋಕಸಭೆ ಚುನಾವಣಾ ದಿನಾಂಕ ಪ್ರಕಟವಾದ ನಂತರ ಐಪಿಎಲ್ ಪಂದ್ಯಗಳ ಸ್ಥಳವನ್ನು ನಿರ್ಧರಿಸುವುದಾಗಿ ತಿಳಿಸಿದೆ.
ಲೋಕಸಭೆ ಚುನಾವಣೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆಯುವ ಹಿನ್ನಲೆಯಲ್ಲಿ ಸರ್ಕಾರದ ಗೃಹ ಸಚಿವಾಲಯ ಐಪಿಎಲ್ ಪಂದ್ಯಾವಳಿಗೆ ಭದ್ರತೆ ಸಾಧ್ಯವಿಲ್ಲ ಎಂದು ತಿಳಿಸಿರುವ ಹಿನ್ನಲೆಯಲ್ಲಿ ಬಿಸಿಸಿಐ ಶುಕ್ರವಾರ ಕಾರ್ಯಕಾರಿ ಸಮಿತಿ ಸಭೆಯನ್ನು ನಡೆಸಿತು. ಏ.9ರಿಂದ ಜೂ.3ರವರೆಗೆ ಐಪಿಎಲ್ ಪಂದ್ಯಾವಳಿಯನ್ನು ನಡೆಸಲು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದ್ದು, ಈ ವೇಳೆ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಲೋಕಸಭೆ ಚುನಾವಣ ವೇಳಾಪಟ್ಟಿ ದಿನಾಂಕ ಪ್ರಕಟವಾದ ನಂತರವೇ ಐಪಿಎಲ್ ಪಂದ್ಯಗಳ ಸ್ಥಳವನ್ನು ನಿರ್ಧರಿಸಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ತಿಳಿಸಿದ್ದಾರೆ.
 ಪಂದ್ಯಾವಳಿಯ ಪ್ರಾಯೋಜಕರಿಂದ ಒತ್ತಡ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಸಾಧ್ಯವಾದಷ್ಟು ಹೆಚ್ಚಿನ ಪಂದ್ಯಗಳನ್ನು ಭಾರತದಲ್ಲೇ ಆಡಿಸಲು ಸತತ ಪ್ರಯತ್ನ ನಡೆಸುತ್ತಿದೆ. ಒಂದು ವೇಳೆ ಚುನಾವಣೆಯಿಂದಾಗಿ ಪೂರ್ಣ ಪ್ರಮಾಣದ ಪಂದ್ಯಾವಳಿ ಸ್ಥಳಾಂತರವಾಗುವುದಾದರೆ ದಕ್ಷಿಣ ಆಫ್ರಿಕಾ ಪಂದ್ಯಾವಳಿಯನ್ನು ಆಯೋಜಿಸಲಿದೆ. ದಕ್ಷಿಣ ಆಫ್ರಿಕಾದಲ್ಲಿ ಉತ್ತಮ ಪಿಚ್‌ಗಳಿದ್ದು, ಬಿಸಿಸಿಐ ಜತೆಗಿನ ಸಂಬಂಧವನ್ನು ವೃದ್ಧಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ಅಲ್ಲದೆ ದಕ್ಷಿಣ ಆಫ್ರಿಕಾದಲ್ಲಿ ಪಂದ್ಯಾವಳಿ ನಡೆಸಿದರೆ ಭಾರತದಲ್ಲಿ ಅಭಿಮಾನಿಗಳು ಟಿವಿ ವೀಕ್ಷಣೆಗೂ ಸಮಯ ಉತ್ತಮವಾಗಲಿದೆ. ಹಾಗಾಗಿ ದಕ್ಷಿಣ ಆಫ್ರಿಕಾ ಮೊದಲ ಅವಕಾಶವಾಗಿದೆ. ಇನ್ನು ಚುನಾವಣೆ ಪ್ರಕ್ರಿಯೆ ಹಾಗೂ ಮತ ಎಣಿಕೆ ಪ್ರಕ್ರಿಯೆ ಮೇ.15ರ ಒಳಗಾಗಿ ಮುಕ್ತಾಯವಾಗುವುದಾದರೆ ಆರಂಭಿಕ ಪಂದ್ಯಗಳನ್ನು ನೆರೆ ರಾಷ್ಟ್ರಗಳಾದ ಬಾಂಗ್ಲಾದೇಶ ಅಥವಾ ಯುಎಇಯಲ್ಲಿ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.   
ಮಾ.5ರ ಒಳಗಾಗಿ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತಕೆ ಇದ್ದು, ಚುನಾವಣಾ ಪ್ರಕ್ರಿಯೆ ಮೇ 15ರ ಒಳಗಾಗಿ ಮುಕ್ತಾಯಗೊಂಡರೆ ಆರಂಭಿಕ ಪಂದ್ಯಗಳನ್ನು ಯುಎಇ ಅಥವಾ ಬಾಂಗ್ಲಾದೇಶದಲ್ಲಿ ನಡೆಸ,ಲಾಗುವುದು ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement