ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಅಗ್ರಸ್ಥಾನಕ್ಕೆ ನೋವಾಕ್ ಜೋಕೊವಿಚ್

Rashmi Kasaragodu
Updated On : 8 Jul 2014, 1:13 am

ಲಂಡನ್: ಪ್ರತಿಷ್ಠಿತ ವಿಂಬಲ್ಡನ್ ಕಿರೀಟವನ್ನು ಮುಡಿಗೇರಿಸಿಕೊಂಡ ಸರ್ಬಿಯಾದ ನೊವಾಕ್ ಜೋಕೊವಿಚ್ ವಿಶ್ವ ಟೆನಿಸ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಆ್ಯಂಡಿ ಮರ್ರೆ 10ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಭಾನುವಾರ ನಡೆದ ವಿಂಬಲ್ಡನ್ ಫೈನಲ್ ಪಂದ್ಯದಲ್ಲಿ ಮಾಜಿ ನಂಬರ್ ಒನ್ ಆಟಗಾರ ರೋಜರ್ ಫೆಡರರ್ ವಿರುದ್ಧ ರೋಚಕ ಗೆಲವು ದಾಖಲಿಸಿದ ಜೋಕೊವಿಚ್, ರಾಫೆಲ್ ನಡಾಲ್ ಅವರನ್ನು ಹಿಂದಿಕ್ಕುವ ಮೂಲಕ ಅಗ್ರಪಟ್ಟ ಅಲಂಕರಿಸಿದ್ದಾರೆ.
ಇನ್ನು ರನ್ನರ್ ಅಪ್ ಸ್ಥಾನವನ್ನು ಅಲಂಕರಿಸಿದ ರೋಜರ್ ಫೆಡರರ್, ಮೂರನೇ ಸ್ಥಾನ ಪಡೆದಿದ್ದಾರೆ. ಇನ್ನು ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿದ್ದ ಆ್ಯಂಡಿ ಮರ್ರೆ ನೀರಸ ಪ್ರದರ್ಶನದೊಂದಿಗೆ 5ನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement