ಸನ್ನಿ ಅರ್ಜಿ ವಿಚಾರಣೆ ಮುಂದಕ್ಕೆ
ನವದೆಹಲಿ: ಐಪಿಎಲ್ 7ನೇ ಆವೃತ್ತಿಯ ಆಡಳಿತವನ್ನು ನಿರ್ವಹಿಸಲು ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ನೀಡಿರುವ ಸಲಹೆಗಳ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಶುಕ್ರವಾರ, ಮುಖ್ಯ ನ್ಯಾಯಮೂರ್ತಿ ಆರ್.ಎಂ ಲೊಧ, ನ್ಯಾ.ಪಿ.ಸಿ ಘೋಷ್ ಹಾಗೂ ನ್ಯಾ.ರೊಹಿಂಟನ್ ನಾರಿಮನ್ ಅವರ ಪೀಠ ಈ ಅರ್ಜಿಯ ವಿಚಾರಣೆ ನಡೆಸಬೇಕಿತ್ತು.
ಆದರೆ ನ್ಯಾ. ನಾರಿಮನ್ ಅವರು ನ್ಯಾಯಮೂರ್ತಿ ಸ್ಥಾನಕ್ಕೆ ಆಯ್ಕೆಯಾಗುವ ಮುನ್ನ, ಸುಪ್ರೀಂ ಕೋರ್ಟ್ ಐಪಿಎಲ್ ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸೂಚಿಸಿದ್ದ ಎನ್.ಶ್ರೀನಿವಾಸನ್ ಅವರ ಪರ ವಕೀಲರಾಗಿ ಕಾರ್ಯ ನಿರ್ವಹಿಸಿದ್ದರು. ಹಾಗಾಗಿ ಈ ಅರ್ಜಿಯ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಹಿಸಲಾಗಿದೆ.