ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಮಹೇಲ ವಿದಾಯ?

Srinivasa Murthy VN
Updated On : 15 Jul 2014, 12:21 pm

ಕೊಲಂಬೊ: ಶ್ರೀಲಂಕಾದ ಮಾಜಿ ನಾಯಕ ಮಹೆಲಾ ಜಯವರ್ದನೆ ಅಂತಾರಾಷ್ಟ್ರೀಯ ಟೆಸ್ಟ್ ವೃತ್ತಿಜೀವನಕ್ಕೆ ಬರುವ ಆಗಸ್ಟ್‌ನಲ್ಲಿ ವಿದಾಯ ಹೇಳಲಿದ್ದಾರೆ. ತವರಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವಣ ಟೆಸ್ಟ್ ಸರಣಿ ಮುಕ್ತಾಯವಾದ ನಂತರ ಈ ನಿರ್ಧಾರ ಕೈಗೊಂಡಿದ್ದಾರೆ.      37 ವರ್ಷದ ಜಯವರ್ದನೆ ಶ್ರೀಲಂಕಾ ಕ್ರಿಕೆಟ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆ್ಯಶ್ಲೆ ಡಿ ಸಿಲ್ವಾ ಅವರಿಗೆ ಪತ್ರ ಬರೆದಿದ್ದು, ಟೆಸ್ಟ್ ಮಾದರಿಗೆ ವಿದಾಯ ಹೇಳಲು ಇಚ್ಛಿಸಿರುವುದಾಗಿ ತಿಳಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ.
ಈ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾದುದಲ್ಲ. ಕಳೆದ 18 ವರ್ಷಗಳಿಂದ ನನ್ನ ದೇಶವನ್ನು ಪ್ರತಿನಿಧಿಸಿದ ಭಾಗ್ಯ ದೊರೆತಿರುವುದು ಅದೃಷ್ಟ. ಈಗ ವಿದಾಯ ಹೇಳಲು ಸರಿಯಾದ ಸಮಯ ಎಂದು ಜಯವರ್ದನೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement