ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಹಾಕಿ: ಆಸೀಸ್ ವಿರುದ್ಧ ಮುಖಭಂಗ

Srinivasa Murthy VN
Updated On : 30 Jul 2014, 12:25 pm

ಗ್ಲಾಸ್ಗೋ: ಸರ್ದಾರ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದೆ.
ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಭಾರತ ತಂಡ 2-4 ಗೋಲುಗಳ ಅಂತರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿತು. ಈ ಮೂಲಕ ಭಾರತ 3 ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಪಂದ್ಯದ ಆರಂಭದಿಂದಲೇ ಭಾರತದ ಮೇಲೆ ನಿಯಂತ್ರಣ ಸಾಧಿಸಿದ ಕಾಂಗರೂಗಳು ಪಂದ್ಯದ 20ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದರು. ಸಿಕ್ಕ ಪೆನಾಲ್ಟಿ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದ ಸಿರೆಲ್ಲೊ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ಒಂದು ಹಂತದಲ್ಲಿ ಭಾರತ 0-3 ಅಂತರದಲ್ಲಿ ಹಿನ್ನಡೆ ಅನುಭವಿಸಿತ್ತು ನಂತರ ಸಿಕ್ಕ ಎರಡು ಪೆನಾಲ್ಟಿ ಅವಕಾಶ ಬಳಸಿಕೊಂಡ ರೂಪಿಂದರ್ ಪಾಲ್ ಸಿಂಗ್ ತಂಡಕ್ಕೆ ಎರಡು ಗೋಲು ತಂದರು. ನಂತರದ ಹಂತದಲ್ಲಿ ಮತ್ತೊಂದು ಗೋಲು ದಾಖಲಿಸಿದ ಕಾಂಗರೂಗಳು 4-2 ಅಂತರದಲ್ಲಿ ಗೆಲವು ದಾಖಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement