ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆಲ್ಲಬೇಕು: ಸುಶೀಲ್

Srinivasa Murthy VN
Updated On : 30 Jul 2014, 11:45 am

ಗ್ಲಾಸ್ಗೋ: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಡುವಲ್ಲಿ ಯಶಸ್ವಿಯಾದ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್, ಮುಂಬರುವ ಏಷ್ಯನ್ ಕ್ರೀಡಾಕೂಟದಲ್ಲೂ ಚಿನ್ನದ ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ನನ್ನ ಮುಂದಿರುವ ಎರಡು ಅಂತಾರಾಷ್ಟ್ರೀಯ ಕ್ರೀಡಾಕೂಟಗಳೆಂದರೆ, ವಿಶ್ವ ಚಾಂಪಿಯನ್‌ಶಿಪ್ ಹಾಗೂ ಏಷ್ಯನ್ ಕ್ರೀಡಾಕೂಟ. ನನ್ನ ಪ್ರಮುಖ ಗುರಿ ರಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವುದಾಗಿರುವುದರಿಂದ, ಈ ಎರಡೂ ಕ್ರೀಡಾಕೂಟ ನನ್ನ ಪಾಲಿಗೆ ಮಹತ್ವದ್ದಾಗಿದೆ. ಆದರೆ ನಾನು ಇದುವರೆಗೂ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿಲ್ಲ. ಹಾಗಾಗಿ ಸದ್ಯಕ್ಕೆ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವುದು ಪ್ರಮುಖ ಉದ್ದೇಶವಾಗಿದೆ ಎಂದು ಸುಶೀಲ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement