ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಸ್ಪೇನ್ ಎದುರು ಪಾರಮ್ಯ ಮೆರೆದ ಕಾಂಗರೂ

Srinivasa Murthy VN
Updated On : 3 Jun 2014, 1:23 am

ದಿ ಹೇಗ್ (ಹಾಲೆಂಡ್): ಸಂಪೂರ್ಣ ಆಕ್ರಮಣಕಾರಿ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಹಾಕಿ ತಂಡ, ಹಾಲೆಂಡ್‌ನಲ್ಲಿ ನಡೆಯುತ್ತಿರುವ ಪುರುಷರ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಸ್ಪೇನ್ ವಿರುದ್ಧ 3-0 ಅಂತರದಿಂದ ವಿಜಯ ಸಾಧಿಸಿತು.
ಇದರೊಂದಿಗೆ ಪಂದ್ಯಾವಳಿಯಲ್ಲಿ ಸತತ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಕಂಡುಕೊಂಡಂತಾಗಿದೆ. ಪಂದ್ಯದ ಆರಂಭದಲ್ಲೇ ಗೋಲು ದಾಖಲಿಸಿದ ಆಸ್ಟ್ರೇಲಿಯಾ ಸ್ಪೇನ್ ಮೇಲೆ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಯಿತು.ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ 1-1 ಗೋಲುಗಳಿಂದ ಡ್ರಾ ಸಾಧಿಸಿದ್ದ ಸ್ಪೇನ್ 1 ಅಂಕ ಹೊಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement