5ಕ್ಕೆ ಐಪಿಎಲ್ ಸ್ಥಳ ಅಂತಿಮ
ನಾಗ್ಪುರ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಪಂದ್ಯಾವಳಿಯನ್ನು ಆಯೋಜಿಸುವ ಸ್ಥಳದ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾರ್ಚ್ 5ರಂದು ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ ಭಾನುವಾರ ಈ ವಿಷಯ ತಿಳಿಸಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್-ಮೇ ಅವಧಿಯಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಕೂಡ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಐಪಿಎಲ್‌ಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂಬು ದನ್ನು ಈಗಾಗಲೇ ಸ್ಪಷ್ಟಪಡಿಸಿದೆ.
ಸದ್ಯ ಬಿಸಿಸಿಐ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಅಥವಾ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಪಂದ್ಯಾವಳಿ ಆಯೋಜಿಸುವ ಬಗ್ಗೆ ಚಿಂತನೆ ನಡೆಸಿದೆ. ಶ್ರೀಲಂಕಾ ನಾಲ್ಕನೇ ಸ್ಥಳವಾಗಿ ಗುರುತಿಸಲಾಗಿತ್ತಾದರೂ, ಆ ಅವಧಿಯಲ್ಲಿ ಮಳೆಯ ಭೀತಿ ಇರುವ ಕಾರಣ ಪಟ್ಟಿಯಿಂದ ಅದನ್ನು ತೆಗೆದುಹಾಕಲಾಯಿತು ಟೂರ್ನಿಯ ಅರ್ಧಭಾಗವನ್ನು ಹೊರದೇಶದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಉಳಿದ ಭಾಗವನ್ನು ಮೇನಲ್ಲಿ ಚುನಾವಣೆ ಕೊನೆಗೊಂಡ ಬಳಿಕ ಆಯೋಜಿಸವು ಬಗ್ಗೆ ಚಿಂತಿಸಲಾಗುತ್ತಿದೆ ಎಂದು ರಾಜೀವ್ ಶುಕ್ಲಾ ಹೇಳಿದ್ದಾರೆ.