ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಇಂಡಿಯಾ ಓಪನ್ ಪ್ರಶಸ್ತಿ ಮೊತ್ತ ಹೆಚ್ಚಳ

Srinivasa Murthy VN
Updated On : 9 Mar 2014, 12:53 pm

ನವದೆಹಲಿ: ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಬಹುಮಾನ ಮೊತ್ತವನ್ನು 200,000 ಡಾಲರ್‌ನಿಂದ 250,000 ಡಾಲರ್‌ಗೆ ಹೆಚ್ಚಿಸಲಾಗಿದೆ. 'ಪಂದ್ಯಾವಳಿಯ ಪ್ರಶಸ್ತಿ ಮೊತ್ತ ಹೆಚ್ಚಿಸಿರುವುದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್‌ನ ತೀರ್ಮಾನವಾಗಿದೆ' ಎಂದು ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯ ಉಪಾಧ್ಯಕ್ಷ ಟಿಪಿಎಸ್ ಪುರಿ ತಿಳಿಸಿದ್ದಾರೆ. ಇಲ್ಲಿನ ಸಿರಿ ಫೋರ್ಟ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಏಪ್ರಿಲ್ 1ರಿಂದ 6ರವರೆಗೆ ನಡೆಯಲಿದ್ದು, ವಿಶ್ವದ ಅಗ್ರ ಆಟಗಾರರೆಲ್ಲರೂ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಪಂದ್ಯಾವಳಿಗೆ ಪ್ರವೇಶ ಪಡೆಯಲು ಫೆಬ್ರವರಿ 25 ಕೊನೆಯ ದಿನಾಂಕವಾಗಿದೆ. ಹಾಲಿ ಚಾಂಪಿಯನ್ ವಿಶ್ವದ ನಂಬರ್ 1 ಆಟಗಾರ ಲೀ ಚಾಂಗ್ ವೀ ಅವರು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಮತ್ತು ಮಹಿಳೆಯರ ಸಿಂಗಲ್ಸ್‌ನಲ್ಲಿ ವಿಶ್ವ ಚಾಂಪಿಯನ್ ರತಚಾನಾಕ್ ಇಂತನಾನ್ ಅವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement