ಮಾ.14ಕ್ಕೆ ಟೀಂ ಇಂಡಿಯಾ ಪ್ರಯಾಣ
ಮುಂಬೈ: ಇತ್ತೀಚಿನ ದಿನಗಳಲ್ಲಿ ಕಳಪೆ ಪ್ರದರ್ಶನದ ಮೂಲಕ ಟೀಕಾಕಾರರ ಬಾಯಿಗೆ ತುತ್ತಾಗಿರುವ ಭಾರತ ತಂಡ, ಮುಂಬರುವ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಮಾ.14ರಂದು ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಲಿದೆ. ಮಾ.16ರಿಂದ ಪಂದ್ಯಾವಳಿ ಆರಂಭವಾಗಲಿದ್ದು, ಭಾರತ ತಂಡ ಮಾ.21ರಂದು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತಮ್ಮ ಅಭಿಯಾನ ಆರಂಭಿಸಲಿದೆ. ಇದಕ್ಕೂ ಮೊದಲು ಭಾರತ ತಂಡ ಮಾ.17ರಂದು ಶ್ರೀಲಂಕಾ ವಿರುದ್ಧ ಹಾಗೂ ಮಾ.19ರಂದು ಇಂಗ್ಲೆಂಡ್ ವಿರುದ್ಧ ಎರಡು ಅಭ್ಯಾಸ ಪಂದ್ಯವನ್ನಾಡಲಿದೆ.