ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಚುನಾವಣೆ ನಂತರ ಐಪಿಎಲ್‌ಗೆ ಸರ್ಕಾರ ಅಸ್ತು

Vishwanath S
Updated On : 12 Mar 2014, 1:12 am

ನವದೆಹಲಿ: ಲೋಕಸಭೆ ಚುನಾವಣೆಯ ನಂತರ ಭಾರತದಲ್ಲಿ ಐಪಿಎಲ್ ಪಂದ್ಯಗಳಿಗೆ ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ಬಿಸಿಸಿಐಗೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ.
ಚುನಾವಣೆ ನಂತರ ಐಪಿಎಲ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಯಾವುದೇ ಅಡ್ಡಿ ಇಲ್ಲ. ಆದರೆ ಪಂದ್ಯಗಳನ್ನು ಆಯೋಜಿಸುವಾಗ ಆಯಾ ರಾಜ್ಯಗಳ ಸರ್ಕಾರದ ಜತೆ ಮಾತುಕತೆ ನಡೆಸಬೇಕು ಎಂದು ಬಿಸಿಸಿಐಗೆ ಗೃಹ ಸಚಿವಾಲಯ ಸೂಚನೆ ನೀಡಿದೆ ಎಂಬ ಮಾಹಿತಿ ಬಂದಿದೆ.
ಲೋಕಸಭೆ ಚುನಾವಣೆ ಪ್ರಕ್ರಿಯೆ ಮೇ 16ಕ್ಕೆ ಮುಕ್ತಾಯಗೊಳ್ಳಲಿದ್ದು, ಅಲ್ಲಿಯವರೆಗೂ ಪಂದ್ಯಾವಳಿಯ ಆರಂಭಿಕ ಹಂತದ ಪಂದ್ಯಗಳನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದು. ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಬಿಸಿಸಿಐ ಐಪಿಎಲ್‌ನ 60 ಪಂದ್ಯಗಳಲ್ಲಿ 44 ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಗೃಹ ಇಲಾಖೆ ಅವಕಾಶ ನೀಡಿದೆ. ಇನ್ನು ಆರಂಭಿಕ ಹಂತದ ಪಂದ್ಯಗಳನ್ನು ಬಾಂಗ್ಲಾದೇಶ ಆಯೋಜಿಸುವ ಸಾಧ್ಯತೆಗಳಿವೆ. ಆದರೆ ಭಾರತ ತಂಡ ಜೂನ್‌ನಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಲಿರುವ ಹಿನ್ನಲೆಯಲ್ಲಿ ಬಿಸಿಸಿಐ ಏ.9ರಿಂದ ಜೂ.3ರ ಒಳಗಾಗಿ ಐಪಿಎಲ್ ಪಂದ್ಯಾವಳಿಯನ್ನು ಮುಕ್ತಾಯಗೊಳಿಸಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement