ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಡೇಲ್ ಸ್ಟೇಯ್ನ್, ಡು ಪ್ಲೆಸಿಸ್ ಅನುಮಾನ

Vishwanath S
Updated On : 21 Mar 2014, 12:49 pm

ಢಾಕಾ: ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲೊಂದಾದ ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಗಾಯದ ಸಮಸ್ಯೆಯನ್ನು ಎದುರಿಸುತ್ತಿದೆ. ಗಾಯಾಳು ವೇಗಿ ಡೇಲ್ ಸ್ಟೇಯ್ನ್ ಇನ್ನೂ ಚೇತರಿಸಿಕೊಳ್ಳುವ ಮುನ್ನವೇ, ನಾಯಕ ಫಫ್ ಡು ಪ್ಲೆಸಿಸ್ ಗಾಯಗೊಂಡಿರುವುದು ತಂಡಕ್ಕೆ ಆತಂಕ ಉಂಟುಮಾಡಿದೆ.
ಇಬ್ಬರೂ ಪ್ರಮುಖ ಆಟಗಾರರು ಸ್ನಾಯು ಸೆಳೆತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಶನಿವಾರ ತನ್ನ ಮೊದಲ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೆಣಸಲಿರುವ ಹರಿಣಗಳ ತಂಡ, ಈಗ ತನ್ನ ಆಟಗಾರರು ಚೇತರಿಸಿಕೊಳ್ಳುವ ಭರವಸೆಯನ್ನು ಎದುರು ನೋಡುತ್ತಿದೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯಿಂದಲೇ, ಸ್ಟೇಯ್ನ್ ಅವರು ಬಲಗಾಲು ಸ್ನಾಯು ಸೆಳೆತದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಬುಧವಾರ ಪಾಕಿಸ್ತಾನದ ವಿರುದ್ಧ ನಡೆದ ಅಭ್ಯಾಸ ಪಂದ್ಯಕ್ಕೆ ಅಲಭ್ಯರಾಗಿದ್ದರು.
'ಮೊದಲ ಪಂದ್ಯಕ್ಕೂ ಮುನ್ನ ಚೇತರಿಸಿಕೊಳ್ಳಲು ಸ್ಟೇಯ್ನ್ ಅವರಿಗೆ ದೈಹಿಕ ತಜ್ಞರು ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ' ಎಂದು ಬುಧವಾರ ಸಂಜೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
'ಇನ್ನು ಡು ಪ್ಲೆಸಿಸ್ ಅವರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಿಲ್ಲ. ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸುವ ಡುಪ್ಲಿಸಿಸ್ ಅವರ ಮೇಲೂ ವೈದ್ಯರು ನಿಗಾ ವಹಿಸಿದ್ದಾರೆ' ಎಂದು ಆಫ್ರಿಕಾ ಕ್ರಿಕೆಟ್ ಸಂಸ್ಥೆ ತಿಳಿಸಿದೆ.
ಒಂದು ವೇಳೆ ಶ್ರೀಲಂಕಾ ವಿರುದ್ಧ ಡುಪ್ಲಿಸಿಸ್ ಅವರು ಪಂದ್ಯದಿಂದ ಹೊರಗುಳಿದರೆ, ಏಕದಿನ ತಂಡದ ನಾಯಕ ಎಬಿ ಡಿವಿಲಿಯರ್ಸ್ ಅವರು ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement