ಬೆಟ್ಟಿಂಗ್: 6 ಮಂದಿ ಬಂಧನ
ಕುಣಿಗಲ್: ಭಾರತ-ವೆಸ್ಟ್ ಇಂಡೀಸ್ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಬೆಟ್ಟಿಂಗ್ ನಡೆಸುತ್ತಿದ್ದ ಜಾಲದ ಮೇಲೆ ಭಾನುವಾರ ರಾತ್ರಿ ದಾಳಿ ನಡೆಸಿದ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು, ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದ 6 ಮಂದಿಯನ್ನು ಬಂಧಿಸಿ, ರು. 31,300, ಆರು ಮೊಬೈಲ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ತಾಲೂಕಿನ ಅಂಚೇಪಾಳ್ಯ ಕೈಗಾರಿಕಾ ವಸಾಹತು ಪ್ರದೇಶದ ಮುಖ್ಯರಸ್ತೆಯಲ್ಲಿನ ಚಹ ಅಂಗಡಿಯಲ್ಲಿ ಟಿವಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸುವ ನೆಪದಲ್ಲಿ ಬೆಟ್ಟಿಂಗ್ ದಂದೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಡಿಸಿಬಿ ಪೊಲೀಸರು, ರಾತ್ರಿ ದಾಳಿ ನಡೆಸಿ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ರೇವಣ್ಣಗೌಡ ಅ. ಪಪ್ಪಿ, ಯೋಗೀಶ್,ದೇವರಾಜು, ನಾಗೇಶ, ಗಂಗರೇವಯ್ಯ, ಮೋಹನ ಎಂಬ ಆರು ಮಂದಿಯನ್ನು ಬಂಧಿಸಿ, ಮುಂದಿನ ಕ್ರಮಕ್ಕೆ ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ.