ಎಂಸಿಎ ಪತ್ರ: ತೀರ್ಮಾನ ಮುಂದಕ್ಕೆ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಮತ್ತು ಕಾರಣ ಕೇಳಿ, ಮುಂಬೈ ಕ್ರಿಕೆಟ್ ಸಂಸ್ಥೆ ಬರೆದ ಪತ್ರಕ್ಕೆ ಉತ್ತರ ನೀಡುವುದನ್ನು ಪಂದ್ಯಾವಳಿಯ ಆಡಳಿತ ಮಂಡಳಿ ಮಂಗಳವಾರ ಮುಂದೂಡಿದೆ. 'ಪಂದ್ಯ ಸ್ಥಳಾಂತರ ಮಾಡಿರುವ ಕುರಿತು ಮುಂಬೈ ಕ್ರಿಕೆಟ್ ಸಂಸ್ಥೆ ಪ್ರತಿಭಟನೆ ನಡೆಸಿರುವ ಬಗ್ಗೆ ಇನ್ನೂ ಯಾವುದೇ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ' ಎಂದು ಬಿಸಿಸಿಐನ ಪ್ರಧಾನ ಕಚೇರಿಯಲ್ಲಿ ಕಾಯುತ್ತಿದ್ದ ಪತ್ರಕರ್ತರಿಗೆ ಸುನಿಲ್ ಗವಾಸ್ಕರ್ ತಿಳಿಸಿದರು. ಆದರೆ, ಆ ಕುರಿತು ಯಾವಾಗ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂಬ ಬಗ್ಗೆ ಮಾತ್ರ ಗಾವಸ್ಕರ್ ಯಾವುದೇ ರೀತಿಯ ಹೇಳಿಕೆ ನೀಡಲಿಲ್ಲ.