ಅಂಪೈರ್ಗೆ ಅಗೌರವ ಗಂಭೀರ್ಗೆ ದಂಡ
ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್ ತೀರ್ಮಾನಕ್ಕೆ ಅಗೌರವ ತೋರಿದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಅವರಿಗೆ ಪಂದ್ಯ ಶುಲ್ಕದ ಶೇ. 15ರಷ್ಟು ದಂಡ ವಿಧಿಸಲಾಗಿದೆ.
'ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ನೀತಿ ಸಂಹಿತೆಯ ಮೊದಲ ಸ್ತರದ ಅಪರಾಧ ಮಾಡಿರುವ ಕುರಿತು ಗಂಭೀರ್ ಅವರು ಒಪ್ಪಿಕೊಂಡಿದ್ದಾರೆ. ಆದರೆ, ಪ್ರತಿಯೊಂದು ಪಂದ್ಯದಲ್ಲಿ ಮ್ಯಾಚ್ ರೆಫೆರಿ ನೀಡುವ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ' ಎಂದು ಐಪಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು ಕೆಕೆಆರ್ 7 ವಿಕೆಟ್ಗಳಿಂದ ಗೆದ್ದುಕೊಂಡಿತ್ತು.