ಕ್ರೀಡಾ ಸಚಿವಾಲಯಕ್ಕೆ ಸುಪ್ರೀಂ ನೋಟಿಸ್
ನವದೆಹಲಿ: ಹಾಕಿ ಇಂಡಿಯಾಗೆ ರಾಷ್ಟ್ರೀಯ ಕ್ರೀಡಾ ಫೆಡರೇಷನ್ ಸ್ಥಾನಮಾನವನ್ನು ನೀಡುವುದಕ್ಕೆ ತಡೆಯಾಜ್ಞೆ ನೀಡದಿರುವುದಕ್ಕೆ ಭಾರತೀಯ ಹಾಕಿ ಫೆಡರೇಷನ್ ಸುಪ್ರೀ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಹಿನ್ನಲೆಯಲ್ಲಿ, ಈ ಕುರಿತು ಉತ್ತರ ನೀಡುವಂತೆ ಕ್ರೀಡಾ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಭಾರತೀಯ ಹಾಕಿ ಫೆಡರೇಷನ್ ಮನವಿಗೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್, ಕ್ರೀಡಾ ಇಲಾಖೆ, ಭಾರತೀಯ ಒಲಿಂಪಿಕ್ಸ್ ಸಮಿತಿ, ಹಾಕಿ ಇಂಡಿಯಾ ಹಾಗೂ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ಗೆ ನೋಟಿಸ್ ಜಾರಿ ಮಾಡಿದೆ ಎಂದು ಐಎಚ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದಲ್ಲಿ ಹಾಕಿ ಕ್ರೀಡೆಯನ್ನು ಯಾವ ಸಂಸ್ಥೆ ವಹಿಸಿಕೊಳ್ಳಬೇಕೆಂಬ ಪ್ರಸ್ತಾವ ಸುಪ್ರೀಂ ಕೋರ್ಟ್ ಮುಂದೆ ಇದ್ದು, ಈ ವಿಷಯ ಇತ್ಯರ್ಥವಾಗುವ ಮುನ್ನವೇ ರಾಷ್ಟ್ರೀಯ ಕ್ರೀಡಾ ಫೆಡರೇಷನ್ ಸ್ಥಾನಮಾನವನ್ನು ನೀಡುವ ಬಗ್ಗೆ ಐಎಚ್ಎಫ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.