ಪಂಜಾಬ್ಗೆ ಲಾಭ
ಚಂಡೀಗಡ: ಪ್ರಸಕ್ತ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಹಾಗೂ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಈ ಆವೃತ್ತಿಯಲ್ಲಿ ರು. 78.01 ಲಕ್ಷ ಲಾಭ ಮಾಡಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ 2012-13ನೇ ಸಾಲಿನ ಆರ್ಥಿಕ ಪಟ್ಟಿ ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ಲಾಭದ ಹಾದಿ ಹಿಡಿದಿರುವುದಾಗಿ ತಿಳಿಸಿದೆ.