ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

2017ರ ಫೀಫಾ ವಿಶ್ವಕಪ್‌ಗೆ ಸರ್ಕಾರದ ಸಹಕಾರ

Srinivasa Murthy VN
Updated On : 29 May 2014, 1:02 am

ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ 2017ರಲ್ಲಿ ಆಯೋಜಿಸಲಾಗುತ್ತಿರುವ 17 ವರ್ಷದೊಳಗಿನವರ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು, ಸಂಪೂರ್ಣ ಪ್ರೋತ್ಸಾಹ ನೀಡುವುದಾಗಿ ಕೇಂದ್ರದ ನೂತನ ಕ್ರೀಡಾ ಸಚಿವ ಸರ್ಬಾನಂದ ಸೋನೊವಾಲ್ ಅವರು ಅಖಿಲ ಭಾರತ ಫುಟ್ಬಾಲ್ ಒಕ್ಕೂಟಕ್ಕೆ (ಎಐಎಫ್‌ಎಫ್) ಭರವಸೆ ನೀಡಿದ್ದಾರೆ.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕುಶಾಲ್ ದಾಸ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಐ-ಲೀಗ್‌ನ ಉಪಾಧ್ಯಕ್ಷರೂ ಆದ ಅಂಕುರ್ ದತ್ತಾ ಅವರು ಬುಧವಾರ ನೂತನ ಕ್ರೀಡಾ ಸಚಿವರನ್ನು ಅವರ ಕಚೇರಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಸುಮಾರು ಅರ್ಧಗಂಟೆ ಕಾಲ ನಡೆದ ಸಚಿವರೊಂದಿಗಿನ ಮಾತುಕತೆಯಲ್ಲಿ, ಭಾರತದಲ್ಲಿ ಚೊಚ್ಚಲ ಬಾರಿಗೆ ನಡೆಯಲಿರುವ ಫೀಫಾ ವಿಶ್ವಕಪ್‌ಗೆ ಸಂಬಂಧಿಸಿದಂತೆ ಸರ್ಬಾನಂದ ಸೋನೊವಾಲ್ ಅವರಿಗೆ ಸಮಗ್ರ ಮಾಹಿತಿ ಒದಗಿಸಲಾಗಿದೆ. ಈ ಪಂದ್ಯಾವಳಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಕುಶಾಲ್ ದಾಸ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement