ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಸುಪ್ರೀಂಗೆ ಅಂತಿಮ ವರದಿ ಸಲ್ಲಿಸಿದ ಮುದ್ಗಲ್ ಸಮಿತಿ

Vishwanath S
Updated On : 3 Nov 2014, 1:43 am

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಮುದ್ಗಲ್ ನೇತೃತ್ವದ ಸಮಿತಿ ಅಂತಿಮ ತನಿಖಾ ವರದಿಯನ್ನು ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ.

ಐಪಿಎಲ್ 6ನೇ ಆವೃತ್ತಿಯಲ್ಲಿ ನಡೆದಿದ್ದ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಮುದ್ಗಲ್ ನೇತೃತ್ವ ಸಮಿತಿಯನ್ನು ರಚಿಸಿತ್ತು. ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಸಮಿತಿ ಇಂದು ಮುಚ್ಚಿದ ಲಕೋಟೆಯಲ್ಲಿ ತನ್ನ ಅಂತಿಮ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಮಿತಿಯ ಹಿರಿಯ ಅಧಿಕಾರಿ ರಾಜು ರಾಮಚಂದ್ರನ್ ಅವರು ನ್ಯಾಯಮೂರ್ತಿ ಟಿ.ಎಸ್ ಠಾಕೂರ್ ಅವರಿಗೆ ಸಲ್ಲಿಸಿದರು.

ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಧ್ಯಕ್ಷ ಎನ್. ಶ್ರೀನಿವಾಸನ್ ಸೇರಿದಂತೆ 12 ಮಂದಿ ವಿರುದ್ಧ ನ್ಯಾ. ಮುದ್ಗಲ್ ಸಮಿತಿ ವರದಿ ಸಲ್ಲಿಸಿದ್ದು, ನವೆಂಬರ್ 10ರಂದು ವಿಚಾರಣೆಗೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement