ವಿಶ್ವನಾಥನ್ ಆನಂದ್ ಮತ್ತು ಮ್ಯಾಗ್ನಸ್ ಕಾರ್ಲ್‌ಸನ್ ಅವರ ಆಟದ ಚಿತ್ರ 
ಕ್ರೀಡೆ

ವಿಶ್ವ ಚೆಸ್ ಚಾಂಪಿಯನ್‌ಶಿಪ್: ವಿಶ್ವನಾಥನ್ ಗೆ ಗೆಲವಿನ ಆನಂದ

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

ಸೋಚಿ: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ವಿಶ್ವನಾಥನ್ ಆನಂದ್ ಮತ್ತೆ ಪುಟಿದೆದ್ದಿದ್ದಾರೆ.

ದ್ವಿತೀಯ ಪಂದ್ಯದಲ್ಲಿ ತಮ್ಮನ್ನು ಪರಾಭವಗೊಳಿಸಿದ್ದ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಮಂಗಳವಾರ ನಡೆದ ಮೂರನೇ ಪಂದ್ಯದಲ್ಲಿ ಗೆಲವು ಸಾಧಿಸುವ ಮೂಲಕ ನಾರ್ವೆ ಆಟಗಾರನಿಗೆ ಸೆಡ್ಡು ಹೊಡೆದಿದ್ದಾರೆ.

ಎರಡನೇ ಸುತ್ತಿನಲ್ಲಿ ಸೋಲನುಭವಿಸಿ ಒತ್ತಡಕ್ಕೆ ಸಿಲುಕಿದ್ದ ಆನಂದ್, ಈ ಪಂದ್ಯದಲ್ಲಿ ಉತ್ತಮ ತಂತ್ರಗಾರಿಕೆ ಪ್ರದರ್ಶಿಸಿದರು. ಆರಂಭಿಕ ಎರಡು ಪಂದ್ಯದಲ್ಲಿ ರಕ್ಷಣಾತ್ಮಕ ಆಟಕ್ಕೆ ಮುಂದಾಗಿದ್ದ ಆನಂದ್, ಈ ಪಂದ್ಯದಲ್ಲಿ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಹಾಗಾಗಿ ಕೇವಲ 34 ನಡೆಗಳಲ್ಲಿ ಆನಂದ್ ಗೆಲವಿನ ನಗೆ ಬೀರಿದರು.

ಈ ಮೂಲಕ ಇಬ್ಬರೂ ಆಟಗಾರರು ತಲಾ 1.5 ಅಂಕಗಳನ್ನು ಗಳಿಸಿ 12 ಪಂದ್ಯಗಳ ಸರಣಿಯಲ್ಲಿ ಸಮಬಲ ಸಾಧಿಸಿದ್ದಾರೆ.

ಮೊದಲ ಪಂದ್ಯದಲ್ಲಿ ಡ್ರಾ ಸಾಧಿಸಿ ಒಂದು ಅಂಕವನ್ನು ಈ ಇಬ್ಬರೂ ಹಂಚಿಕೊಂಡಿದ್ದರು. 2ನೇ ಪಂದ್ಯದಲ್ಲಿ ಕಾರ್ಲ್‌ಸನ್ ಗೆಲವು ಸಾಧಿಸಿ ಒಂದು ಅಂಕ ಪಡೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT