ಪೀಲೆ 
ಕ್ರೀಡೆ

ಫುಟ್ಬಾಲ್ ದಂತಕಥೆ ಪೀಲೆ ಆಸ್ಪತ್ರೆಗೆ ದಾಖಲು

ಜಗದ್ವಿಖ್ಯಾತ ಫುಟ್ಬಾಲ್ ದಂತಕಥೆ ಬ್ರೆಜಿಲ್‌ನ...

ಸೌಪೊಲೊ: ಜಗದ್ವಿಖ್ಯಾತ ಫುಟ್ಬಾಲ್ ದಂತಕಥೆ ಬ್ರೆಜಿಲ್‌ನ ಪೀಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಲ್ಪರ್ಟ್ ಐನ್‌ಸ್ಟೈನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೀಲೆಯವರು ಆಪ್ತ ಸ್ನೇಹಿತ ಜೋಸ್ ಫರ್ನೋಸ್ ರೊಡ್ರಿಗಸ್ ತಿಳಿಸಿದ್ದಾರೆ.

ಬುಧವಾರ ಇದ್ದಕ್ಕಿದ್ದಂತೆ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ತರುವಾಯ ಅವರೀಗ ಚೇತರಿಸಿಕೊಂಡಿದ್ದಾರೆ ಎಂದು ಜೋಸ್ ಹೇಳಿದ್ದಾರೆ.

ಬುಧವಾರ ಸಂಜೆ ಸ್ಥಳೀಯ ವಸ್ತುಸಂಗ್ರಹಾಲಯವೊಂದರಲ್ಲಿ ಪೀಲೆಯವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಪೀಲೆ ಅವರು ಅನಾರೋಗ್ಯ ಪೀಡಿತರಾದ ಹಿನ್ನಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂದು ಜೋಸ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!