ಕ್ರೀಡೆ

ಏಷ್ಯನ್ ಗೇಮ್ಸ್: ಭಾರತದ ಮಹಿಳಾ ಮತ್ತು ಪುರುಷರ ಕಬಡ್ಡಿ ತಂಡಕ್ಕೆ ಚಿನ್ನ

ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದೂವರೆದಿದ್ದು,..

ಇಂಚಾನ್: ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದೂವರೆದಿದ್ದು, ಶುಕ್ರವಾರ ಮಹಿಳಾ ಮತ್ತು ಪುರುಷರ ಕಬಡ್ಡಿ ತಂಡ ಚಿನ್ನದ ಪದಕಗಳನ್ನು ಗೆದ್ದುಕೊಂಡಿವೆ.

ಸಿಯೋನಾಕ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಭಾರತದ ಮಹಿಳಾ ಕಬಡ್ಡಿ ತಂಡ ಇರಾನ್ ವಿರುದ್ಧ 31-21 ಅಂಕಗಳ ಅಂತರದಿಂದ ಗೆಲುವು ಸಾಧಿಸಿದರೆ, ಅದೇ ಇರಾನ್ ವಿರುದ್ಧ ಭಾರತದ ಪುರುಷರ ತಂಡ 27-25 ಅಂಕಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.

ಪುರುಷರ ಕಬಡ್ಡಿ ತಂಡಕ್ಕಿದು ಏಷ್ಯನ್‌ ಗೇಮ್ಸ್‌ನಲ್ಲಿ ಸತತ 7ನೇ ಬಾರಿಯ ಚಿನ್ನದ ಸಾಧನೆಯಾಗಿದೆ. ಇದರೊಂದಿಗೆ ಭಾರತ ಈವರೆಗೆ ಒಟ್ಟು 11 ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video