2015ರ ವಿಶ್ವಕಪ್ ಯಶಸ್ಸು ಬ್ಯಾಟ್ಸ್ಮನ್ ಮೇಲೆ ಅವಲಂಬನೆ
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ 2015ರಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್...
ಕೋಲ್ಕತಾ: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ 2015ರಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಯಶಸ್ಸು ಬ್ಯಾಟ್ಸ್ಮನ್ಗಳ ಮೇಲೆ ಅವಲಂಬಿತವಾಗಿದೆ ಎಂದು ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಶನಿವಾರ ಹೇಳಿದ್ದಾರೆ.
ಆರಂಭಿಕ ಆಟಗಾರ ಶಿಖರ್ ಧವನ್, ಯುವ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರದರ್ಶನ ತಂಡದಲ್ಲಿ ಮಹತ್ವದ ಪಾತ್ರವಹಿಸಲಿದೆ ಎಂದಿದ್ದಾರೆ. ಸಾಂಪ್ರದಾಯಿಕವಾಗಿ ಭಾರತ ತಂಡ ಸದಾ ಬ್ಯಾಟಿಂಗ್ ಮೇಲೆ ಹೆಚ್ಚು ಅವಲಂಬಿತವಾಗಿದೆ.
ಈ ಬಾರಿಯ ವಿಶ್ವಕಪ್ ಸಹ ಇದಕ್ಕೆ ಹೊರತಾಗಿರಲಾರದು. ಸದ್ಯ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಧವನ್, ಕೊಹ್ಲಿ ಹಾಗೂ ಧೋನಿ ಅವರು ಯಾವುದೇ ದಿನ ತಂಡವನ್ನು ಗೆಲುವಿನ ದಡ ಸೇರಿಸಲು ನೆರವಾಗಬಲ್ಲರು ಎಂದು ಅಭಿಪ್ರಾಯಪಟ್ಟಿದ್ದಾರೆ. ಬರುವ ಫೆಬ್ರವರಿ 14ರಿಂದ ಮಾರ್ಚ್ 29 ರವರೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿ ಆತಿಥ್ಯದಲ್ಲಿ ಪಂದ್ಯಾವಳಿ ನಡೆಯಲಿದೆ.