ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ವಾರಿಯರ್ಸ್ ಮುಕುಟಕ್ಕೆ ಕಿರೀಟ

ಅಂತಿಮ ಕ್ಷಣದಲ್ಲಿ ಅಮಿತ್ ವರ್ಮಾ ಅವರ ಸ್ಫೋಟಕ ಬ್ಯಾಟಿಂಗ್...

Vishwanath S
Updated On : 13 Sept 2014, 10:37 am

ಹುಬ್ಬಳ್ಳಿ: ಅಂತಿಮ ಕ್ಷಣದಲ್ಲಿ ಅಮಿತ್ ವರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ಮೈಸೂರು ವಾರಿಯರ್ಸ್ ತಂಡ ಪ್ರಸಕ್ತ ಋತುವಿನ ಕರ್ನಾಟಕ ಪ್ರೀಮಿಯರ್ ಲೀಗ್‌ನ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ಹುಬ್ಬಳ್ಳಿ ರಾಜನಗರದ ಕೆಎಸ್‌ಸಿಎ ಮೈದಾನದಲ್ಲಿ ಶುಕ್ರವಾರ ನಡೆದ ಹೊನಲು ಬೆಳಕಿನ ಪಂದ್ಯದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮೈಸೂರು ವಾರಿಯರ್ಸ್ ಸೋಲಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬೆಳಗಾವಿ ಪ್ಯಾಂಥರ್ಸ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 170 ರನ್ ಕಲೆ ಹಾಕಿತು. ಗೆಲುವಿನ 171 ರನ್‌ಗಳ ಗುರಿ ಬೆನ್ನಟ್ಟಿದ ಮೈಸೂರು ವಾರಿಯರ್ಸ್ 19.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ದಾಖಲಿಸಿತ್ತು. ಬ್ಯಾಟಿಂಗ್ ಪ್ರಾರಂಭದಲ್ಲಿ ನಿಧಾನ ಗತಿಯಲ್ಲಿ ಸಾಗಿತ್ತಾದರೂ ಮಂಜೇಶ ರೆಡ್ಡಿ ಬ್ಯಾಟಿಂಗ್‌ನಲ್ಲಿ ಬಂದ ಮಿಂಚಿನ 52 ರನ್‌ಗಳು ಜಯದ ಮಾರ್ಗ ಸುಲಭಗೊಳಿಸಿದವು.

ಸ್ಕೋರ್ ವಿವರ
ಬೆಳಗಾವಿ ಪ್ಯಾಂಥರ್ಸ್ 20 ಓವರ್‌ಗೆ 7/170
ಮೈಸೂರು ವಾರಿಯರ್ಸ್ 19.5 ಓವರ್‌ಗೆ 4/174


-ಆನಂದ ಅಂಗಡಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement